ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸಿನಿಮಾ ಇಲ್ಲವೇ ಧಾರವಾಹಿಗಳಲ್ಲಿ ಬಾಲ ನಟರು / ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ನಿರ್ಮಾಪಕರು, ನಿರ್ದೇಶಕರು, ಆಯೋಜಕರು ಮೊದಲು ಬಾಲ ಹಾಗೂ ಕಿಶೋರಾ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಕರ್ನಾಟಕ ನಿಯಮಗಳ 2ಸಿ ರಲ್ಲಿ ಮಗು(1) ಕಲಂ 3ರ ನಿಬಂಧನೆಗಳ ನಿಯಮದ ಅನುಸಾರ ಜಿಲ್ಲಾಧಿಕಾರಿಗಳ ಅನುಮತಿ ಪತ್ರ ಪಡೆದುಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನ ಸೊಸೈಟಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಯಾವುದೇ ಮಗುವು 1 ದಿನದಲ್ಲಿ 5 ಗಂಟೆಗಿಂತ ಹೆಚ್ಚಿನ ಅವಧಿಗೆ ನಟನೆಯ ಕೆಲಸಕ್ಕೆ ನಿಯೋಜಿಸುವಂತಿಲ್ಲ ಮತ್ತು ವಿಶ್ರಾಂತಿ ಇಲ್ಲದೆ 3 ಗಂಟೆಗಿಂತ ಹೆಚ್ಚು ಸಮಯ ಕೆಲಸ ಮಾಡಿಸುವಂತಿಲ್ಲ. ಶಿಕ್ಷಣಕ್ಕೆ ಸಂಬಂಧಿಸಿದ ನಿಬಂಧನೆಗಳು ಸುರಕ್ಷತೆ ಮತ್ತು ಮಕ್ಕಳ ದುರುಪಯೋಗ ತಡೆಯ ಕುರಿತಾದ ಮಾನ್ಯತೆ ಪಡೆದ ಮಾರ್ಗಸೂಚಿ ಅನ್ವಯ ಮುಚ್ಚಳಿಕೆಯನ್ನು ಆಯೋಜಕರು ನೀಡುವುದು.
ಇದನ್ನೂ ಸಹ ಓದಿ: ಹೊಸ ರೇಷನ್ ಕಾರ್ಡ್‌ಗೆ ಅರ್ಜಿ: ಫಲಾನುಭವಿಗಳಿಗೆ ಹೊಸ ಸೌಲಭ್ಯ!
ಈ ರೀತಿ ಮಕ್ಕಳನ್ನು 27 ದಿನಗಳಿಗಿಂತ ಹೆಚ್ಚಿನ ದಿನಗಳು ನಟನೆ ಕೆಲಸದಲ್ಲಿ ಬಳಸಿಕೊಳ್ಳಲು ಅವಕಾಶ ಇರುವುದಿಲ್ಲ. ಮಗುವಿನ ರಕ್ಷಣೆಗೆ ಪ್ರತಿ 5 ಮಕ್ಕಳಿಗೆ ಒಬ್ಬರಂತೆ ಜವಾಬ್ದಾರಿ ವ್ಯಕ್ತಿಯನ್ನು ನೇಮಕ ಮಾಡುವುದು ಹಾಗೂ ಕಾರ್ಯಕ್ರಮದಿಂದ ಬರುವ ಆದಾಯದಲ್ಲಿ ಕನಿಷ್ಠ ಶೇ.20% ರಷ್ಟು ಹಣವನ್ನು ಮಗುವಿನ ಹೆಸರಿಗೆ ನಿಶ್ಚಿತ ಠೇವಣಿ ಇಡುವುದು.
ಈ ರೀತಿ ಜಿಲ್ಲಾಧಿಕಾರಿಗಳ ಅನುಮತಿಯಿಲ್ಲದೇ ಮಕ್ಕಳನ್ನು ಬಳಸಿಕೊಂಡಲ್ಲಿ ಕಾನೂನು ಉಲ್ಲಂಘಿಸುವ ಸಿನಿಮಾ ಹಾಗೂ ಧಾರವಾಹಿ ಆಯೋಜಕರ/ ನಿರ್ಮಾಪಕರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಬಾಲಕಾರ್ಮಿಕ ಯೋಜನ ಸೊಸೈಟಿಯ ಕಾರ್ಮಿಕ ಅಧಿಕಾರಿಗಳು ಮತ್ತು ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.
ಇತರೆ ವಿಷಯಗಳು:
ಸರ್ಕಾರದ ಹೊಸ ಸ್ಕಾಲರ್‌ಶಿಪ್ ಯೋಜನೆ! ಪ್ರತಿ ವಿದ್ಯಾರ್ಥಿಗೂ ಸಿಗುತ್ತೆ ₹6000
ಪೇಪರ್ ಆಧಾರಿತ ಆಸ್ತಿ ನೋಂದಣಿ ರದ್ದು! ಆಸ್ತಿ ನೋಂದಣಿಯಲ್ಲಿ ಬದಲಾವಣೆ ಮಾಡಿದ ಸರ್ಕಾರ