rtgh

ಯುವನಿಧಿ ಫಲಾನುಭವಿಗಳೇ ಫೆ. 29 ರೊಳಗೆ ಈ ಕೆಲಸ ಮಾಡಿ, ಮಾಡದಿದ್ರೆ ಬರಲ್ಲ ನಿರುದ್ಯೋಗ ಭತ್ಯೆ


ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಮುಖಾಂತರ ಸರ್ಕಾರದ ಮಹತ್ವದ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಗೆ ಡಿಸೆಂಬರ್, 26 ರಂದು ಜಿಲ್ಲೆಯಲ್ಲಿ ಚಾಲನೆಯನ್ನು ನೀಡಲಾಗಿದೆ.

Yuvanidhi Scheme Kannada

2023 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿದ್ದರು 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದೆ ಇರುವವರಿಗೆ ಮತ್ತು ಉನ್ನತ ವಿದ್ಯಾಭ್ಯಾಸವನ್ನು ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ “ಯುವನಿಧಿ” ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಮತ್ತು ಡಿಪ್ಲೋಮಾ ಪದವೀಧರರಿಗೆ 1500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.

ಇದನ್ನೂ ಸಹ ಓದಿ: ಪ್ರತಿಯೊಬ್ಬರ ಖಾತೆಗೆ ₹1.50 ಲಕ್ಷ ಜಮಾ!! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್‌ ಮಾಡಿ

ಈ ಕೆಲಸ ಮಾಡದಿದ್ರೆ ಬರಲ್ಲ ಹಣ..!

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಯುವನಿಧಿಗೆ ಹೆಸರು ನೋಂದಾನಿಸಿಕೊಂಡು ಸೌಲಭ್ಯವನ್ನು ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು ಉದ್ಯೋಗವಿಲ್ಲದ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತರು ಸೂಚನೆಯನ್ನು ನೀಡಿದ್ದಾರೆ.
ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರೆಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿ ಅಲ್ಲ ಎನ್ನುವ ಸ್ವಯಂ ಘೋಷಣೆಯನ್ನು ಮಾಡಬೇಕು. ಫೆಬ್ರವರಿ ತಿಂಗಳ ಘೋಷಣೆಯನ್ನು ಫೆ. 29 ರಂದು ಘೋಷಣೆಯ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

2023 ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸವನ್ನು ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿಯನ್ನು ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ “ಯುವನಿಧಿ” ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿಗಳನ್ನು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂಪಾಯಿಗಳನ್ನು ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.

ರೈಲ್ವೆಯಲ್ಲಿ 622 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ!! ಯಾವುದೇ ಪರೀಕ್ಷೆಯಿಲ್ಲದೆ ನೇರ ನೇಮಕಾತಿ

ಪ್ಯಾನ್ ಕಾರ್ಡ್ ಹೊಸ ನಿಯಮ: ಈ ತಪ್ಪು ಮಾಡಿದ್ರೆ 10,000 ದಂಡ ಗ್ಯಾರಂಟಿ!!


Leave a Reply

Your email address will not be published. Required fields are marked *