ಎಸ್ ಎಸ್ ಎಲ್ ಸಿ ಪಾಸಾದವರಿಗೂ ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದು ದಾಗಿದೆ ಈ ಲೇಖನದಲ್ಲಿ ನಾವು ಈ ಹುದ್ದೆಗೆ ಬೇಕಾಗುವಂತಹ ಅರ್ಹತೆಗಳು ಮತ್ತು ಹುದ್ದೆಗಳ ವಿವರ ವೇತನ ವಯಸ್ಸಿನ ಮಿತಿ ಶುಲ್ಕದ ವಿವರ ಹಾಗೂ ಅರ್ಜಿಯ ಸಲ್ಲಿಸಲು ಕೊನೆಯ ದಿನಾಂಕವನ್ನು ನೀಡಿದ್ದೇವೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ 10 -4 -2024ರ ಒಳಗಡೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ ಹಾಗೂ ಆನ್ಲೈನ್ ಮೂಲಕ ಹೇಗೆ ಅರ್ಜಿ ಸಲ್ಲಿಸಬಹುದು ಎಂದು ನಾವು ಕೆಳಗಡೆ ನೀಡಿದ್ದೇವೆ ಗಮನವಿಟ್ಟು ಓದಿ.
Table of Contents
- ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳು :
- ಖಾಲಿ ಇರುವ ಹುದ್ದೆಗಳ ವಿವರ :
- ಶೈಕ್ಷಣಿಕ ಅರ್ಹತೆ :
- ವೇತನ ಶ್ರೇಣಿ :
- ವಯಸ್ಸಿನ ಮಿತಿ :
- ಅರ್ಜಿ ಶುಲ್ಕದ ವಿವರ :
- ಪ್ರಮುಖ ದಿನಾಂಕಗಳು :
ಜಿಲ್ಲಾ ನ್ಯಾಯಾಲಯ ಮತ್ತು ಸಕ್ರನ್ ನ್ಯಾಯಾಲಯದ ಅಧೀನದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಹತೆ, ಅರ್ಜಿ ಶುಲ್ಕದ ವಿವರ ವೇತನ ಶ್ರೇಣಿ ವೇತನ ಶ್ರೇಣಿ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇದೀಗ ನೋಡಬಹುದು.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳು :
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧೀನದಲ್ಲಿ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಅನೇಕ ಹುದ್ದೆಗಳು ಖಾಲಿ ಇದ್ದು ಇದೀಗ ಹುದ್ದೆಗಳ ಬರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಹುದ್ದೆಗಳ ವಿವರ ನೋಡುವುದಾದರೆ.
ನೇಮಕಾತಿ ಸಂಸ್ಥೆ | ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ |
ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ | 60 |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮುಖಾಂತರ |
ಉದ್ಯೋಗದ ಸ್ಥಳ | ತುಮಕೂರು ಜಿಲ್ಲೆ |
ತುಮಕೂರು ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಒಟ್ಟು 60 ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.
ಖಾಲಿ ಇರುವ ಹುದ್ದೆಗಳ ವಿವರ :
ತುಮಕೂರು ಜಿಲ್ಲೆಯ ನ್ಯಾಯಾಲಯದಲ್ಲಿ ಕೆಲವೊಂದು ಹುದ್ದೆಗಳು ಖಾಲಿ ಇದ್ದೋ ಆ ಹುದ್ದೆಗಳು ಯಾವುವೆಂದು ನೋಡುವುದಾದರೆ,
- ಶೀಘ್ರ ಲಿಪಿಕಾರರು ಹತ್ತು ಹುದ್ದೆಗಳು
- ಬೆರಳಚ್ಚುಗಾರು 5 ಹುದ್ದೆಗಳು
- ಬೆರಳಚ್ಚು ನಕಲುಗಾರರು 5 ಹುದ್ದೆಗಳು
- ಜವಾನ 40 ಹುದ್ದೆಗಳು
ಹೀಗೆ ತುಮಕೂರು ಜಿಲ್ಲೆಯಲ್ಲಿ ಒಟ್ಟು 60 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ವಿದ್ಯಾರ್ಹತೆಯನ್ನು ಹೊಂದಿರಬೇಕು ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
- ಶೀಘ್ರ ಲಿಪಿಗಾರ ಹುದ್ದೆಗೆ : ದ್ವಿತೀಯ ಪಿಯುಸಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಶೀಘ್ರ ಲಿಪಿಯಲ್ಲಿ ಹಿರಿಯ ದರ್ಜೆ ಮತ್ತು ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಬೆರಳಚ್ಚುಗಾರರು : ಬೆರಳುಸುಗಾರರು ಹುದ್ದೆಗೆ ಪಿಯುಸಿ ಜೊತೆಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಬೆರಳಚ್ಚು ನಕಲುಗಾರರು : ಬೆರಳಚ್ಚು ನಕಲುಗಾರರು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪಿಯುಸಿ ಹಾಗೂ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ಪಾಸಾಗಿರಬೇಕು.
- ಜವಾನ : ಜವಾನ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಪಾಸ್ ಆಗಿರಬೇಕು.
ಒಟ್ಟಾರೆ ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ :
ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
- 22650 ರಿಂದ 52,650 ರವರೆಗೆ ಶೀಘ್ರ ಲಿಪಿಗಾರರು
- 21400 ರಿಂದ 42,000 ಬೆರಳಚ್ಚುಗಾರರು
- 21400 ರಿಂದ 42,000 ಬೆರಳಚ್ಚು ನಕಲುಗಾರರು
- 17000 ದಿಂದ 28950 ಜವಾನ ಹುದ್ದೆಗೆ
ಹೀಗೆ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.
ವಯಸ್ಸಿನ ಮಿತಿ :
ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸಿನ ಮಿತಿ ಕನಿಷ್ಠ 18 ರಿಂದ ಗರಿಷ್ಠ ವಯೋಮಿತಿಯನ್ನು ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.
- 35 ವರ್ಷ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ.
- 38 ವರ್ಷ ಪ್ರವರ್ಗ 2a 2b 3a 3b ಅಭ್ಯರ್ಥಿಗಳಿಗೆ
- 40ವರ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ ಒಂದು ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕದ ವಿವರ :
ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
- ಪ್ರವರ್ಗ 2a 2b 3a 3b ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.
ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರವೇ ಅಭ್ಯರ್ಥಿಗಳು ಪಾವತಿಸಬೇಕಾಗುತ್ತದೆ.
ಪ್ರಮುಖ ದಿನಾಂಕಗಳು :
ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ತಿಳಿದುಕೊಂಡಿರಬೇಕು.
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :12-03-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :10-04-2024
ಈ ನಿಗದಿತ ದಿನಾಂಕದೊಳಗೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ತುಮಕೂರು ಜಿಲ್ಲೆಯಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಬೇಕಾದರೆ ಸಹಾಯವಾಣಿ ಸಂಖ್ಯೆಯಾದ 0816-2278273 ಈ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ತಿಳಿಯಬಹುದು.
ಒಟ್ಟಾರೆ ರಾಜ್ಯ ಸರ್ಕಾರವು ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ವಾಹನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ತಿಂಗಳಿಗೆ 50,000 ವರೆಗೆ ವೇತನವನ್ನು ಪಡೆಯಬಹುದಾಗಿದೆ.