ಡಿಸ್ಟ್ರಿಕ್ಟ್ ಕೋರ್ಟ್ ನಲ್ಲಿ ಕೆಲವೊಂದು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗಿ ಕೋರಿದೆ ಹಾಗೂ ಈ ಒಂದು ಜಿಲ್ಲಾ ನ್ಯಾಯಾಲಯದ ಹುದ್ದೆಗಳಿಗೆ ಬೇಕಾಗಿರುವಂತಹ ಅರ್ಹತೆ ದಾಖಲೆಗಳು ಹಾಗೂ ಎಲ್ಲಿ ಅರ್ಜಿ ಸಲ್ಲಿಸಬೇಕೆಂದು ಈ ಲೇಖನದಲ್ಲಿ ನಾವು ನೀಡಿದ್ದೇವೆ ಆದ್ದರಿಂದ ಈ ಲೇಖನವನ್ನು ಸಂಪೂರ್ಣವಾಗಿ ಓದಿ.
ಉದ್ಯೋಗ ಸ್ಥಳ :
ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರ ಬೆರಳಚ್ಚು ನಕಲುಗಾರ ಸೇರಿದಂತೆ ಒಟ್ಟು 21 ಹುದ್ದೆಗಳಿಗೆ ಅರ್ಜಿ ಆಹ್ವಾನ.
ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ :
- ಅರ್ಜಿ ಸಲ್ಲಿಸುವರು ದ್ವಿತೀಯ ಪಿಯುಸಿ ಯನ್ನು ತೇರ್ಗಡೆ ಹೊಂದಿರಬೇಕು.
- ಮೂರು ವರ್ಷಗಳ ಡಿಪ್ಲೋಮೋ ಪಡೆದಿರುವವರು ಅರ್ಜಿ ಸಲ್ಲಿಸಬಹುದು.
- ಆಂಗ್ಲ ಮತ್ತು ಕನ್ನಡ ಬೆರಳಚ್ಚು ಶ್ರೇಣಿಯಲ್ಲಿ ಉತ್ತೀರ್ಣರಾಗಿರಬೇಕು ಎಂದು ತಿಳಿಸಲಾಗಿದೆ.
ವಯೋಮಿತಿಯ ಮಾಹಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷವನ್ನು ಹೊಂದಿರಬೇಕು.
ಅರ್ಜಿ ಶುಲ್ಕದ ಮಾಹಿತಿ :
- SC ,ST ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ನೂರು ರೂಪಾಯಿ ಶುಲ್ಕ.
- ಇತರೆ ವರ್ಗದ ಜನರಿಗೆ 250 ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ ವಿಧಾನದ ಮಾಹಿತಿ :
ಜಿಲ್ಲಾ ನ್ಯಾಯಾಲಯದ ನೇಮಕಾತಿ ಪ್ರಕಾರ ಆಯ್ಕೆ ವಿಧಾನವು ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 6ರಿಂದ ಆರಂಭವಾಗಿದ್ದು ಕೊನೆಯ ದಿನಾಂಕ ಮೇ ತಿಂಗಳ 6ರವರೆಗೆ ಇದೆ ತಪ್ಪದೆ ಎಲ್ಲರೂ ಅರ್ಜಿ ಸಲ್ಲಿಸಿ. ಈ ಮಾಹಿತಿಯನ್ನು ಸಂಪೂರ್ಣವಾಗಿ ಹೋಗಿದ ನಿಮಗೆಲ್ಲರಿಗೂ ಧನ್ಯವಾದಗಳು.