Admission In Residential Schools
Admission In Residential Schools: KREIS ಮೊರಾರ್ಜಿ ದೇಸಾಯಿ 6ನೇ ತರಗತಿ ಅರ್ಜಿ 2024 4 ಫೆಬ್ರವರಿ 2024 ರಿಂದ ಪ್ರಾರಂಭವಾಗಲಿದೆ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಫೆಬ್ರವರಿ 2024. ವಿದ್ಯಾರ್ಥಿಗಳು ಇಲ್ಲಿ ನೀಡಲಾದ ನೇರ ಲಿಂಕ್ ಮೂಲಕ ಮೊರಾರ್ಜಿ ದೇಸಾಯಿ 6 ನೇ ತರಗತಿ ಪ್ರವೇಶ ಅರ್ಜಿ 2024 ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
Table of Contents
ಮೊರಾರ್ಜಿ ದೇಸಾಯಿ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆ
ಡಿಸೆಂಬರ್ 20; 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಸಿದ್ಧತೆಗಳು ನಡೆಯುತ್ತಿವೆ. ಮೊರಾರ್ಜಿ ದೇಸಾಯಿ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 31 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಕೆಗೆ ಅರ್ಹತೆಗಳು;
ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ.
ಇನ್ನು ಓದಿ: ಮೊಬೈಲ್ ಬಳಕೆ ಮಾಡುವವರಿಗೆ ಭಾರತ ಸರ್ಕಾರದಿಂದ ಎಚ್ಚರಿಕೆ! ಮಾಡದಿದ್ದರೆ ನೀವೇ ನೇರ ಹೊಣೆ!
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷಗಳು ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅವರಿಗೆ ರೂ. 1 ಲಕ್ಷಗಳ ಆದಾಯ ಮಿತಿ ಇರುತ್ತದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ.50 ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ. ಒಮ್ಮೆ ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ಸೇರಿದಲ್ಲಿ 10ನೇ ತರಗತಿಯವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದಾಗಿದೆ.
ಈ ಮೊರಾರ್ಜಿ ದೇಸಾಯಿ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ 6ನೇ ತರಗತಿಗೆ 50 ವಿದ್ಯಾರ್ಥಿಗಳನ್ನು ಅಟಲ್ ಬಿಹಾರಿ ವಾಜಪೇಯಿ ಶಾಲೆಗಳಲ್ಲಿ 6ನೇ ತರಗತಿ 80 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಳ್ಳಲಾಗುವುದು.
ಪ್ರಸ್ತುತ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ತಾಲ್ಲೂಕು ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಅರ್ಹತೆ ಮತ್ತು ಮೀಸಲಾತಿಯಂತೆ ಪಟ್ಟಿ ತಯಾರಿಸಿ, ಮೆರಿಟ್ ಆಧಾರದ ಮೇಲೆ ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು.
ಪ್ರವೇಶ ಪರೀಕ್ಷೆಗೆ ಆನ್‍ಲೈನ್‍ನಲ್ಲಿ ಅರ್ಜಿ
ಅಭ್ಯರ್ಥಿಯು ತನ್ನ ಸ್ವಂತ ಜಿಲ್ಲೆಯಲ್ಲಿರುವ ಎಲ್ಲಾ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು ಮೀಸಲಾತಿಗನುಗುಣವಾಗಿ ಅರ್ಹರಾಗಿರುತ್ತಾನೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಯು ಪ್ರಾಧಿಕಾರದ ವೆಬ್‍ಸೈಟ್ :https://kea.kar.nic.xn--in-muhzkzaz/,www.kreis.kar.nic.in ಅಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರವೇಶ ಪರೀಕ್ಷೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಅರ್ಜಿ ಸಲ್ಲಿಸಿದ ವಸತಿ ಶಾಲೆಯಲ್ಲಿ ಪಡೆದುಕೊಳ್ಳುವುದು.
ಪ್ರವೇಶ ಪರೀಕ್ಷೆಯು ಫೆಬ್ರವರಿ 18 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.