ಲೀಗ್ ಹಂತದಲ್ಲಿ ಸೆಪ್ಟೆಂಬರ್ 2 ರಂದು ಭಾರತ-ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತವಾಗಿದೆ. ಇನ್ನು ಲೀಗ್ ಪಂದ್ಯಗಳ ಬಳಿಕ ಪಾಕಿಸ್ತಾನ್ ಹಾಗೂ ಟೀಮ್ ಇಂಡಿಯಾ ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 10 ರಂದು ಮತ್ತೊಮ್ಮೆ ಮುಖಾಮುಖಿಯಾಗಲಿದೆ.

Asia Cup 2023: ಬಹುನಿರೀಕ್ಷಿತ ಏಷ್ಯಾಕಪ್ ಶುರುವಾಗಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸುತ್ತಿರುವ ಈ ಬಾರಿಯ ಏಷ್ಯಾಕಪ್ ಟೂರ್ನಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿದೆ. ಅಂದರೆ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ಜರುಗಲಿದೆ. ಇಲ್ಲಿ ಭಾರತದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿರುವುದು ವಿಶೇಷ.
ಅದರಂತೆ ಸೆಪ್ಟೆಂಬರ್ 2 ರಂದು ನಡೆಯಲಿರುವ ಮೂರನೇ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದ್ದು, ಈ ಪಂದ್ಯದಲ್ಲಿ ಭಾರತದ ಎದುರಾಳಿ ಪಾಕಿಸ್ತಾನ್ ಎಂಬುದು ವಿಶೇಷ. ಅಲ್ಲದೆ ಈ ಪಂದ್ಯಕ್ಕೆ ಕ್ಯಾಂಡಿಯ ಕ್ರಿಕೆಟ್ ಗ್ರೌಂಡ್ ಆತಿಥ್ಯವಹಿಸಲಿದೆ.
ಭಾರತ-ಪಾಕ್ 3 ಬಾರಿ ಮುಖಾಮುಖಿ: ಲೀಗ್ ಹಂತದಲ್ಲಿ ಸೆಪ್ಟೆಂಬರ್ 2 ರಂದು ಭಾರತ-ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತವಾಗಿದೆ. ಇನ್ನು ಲೀಗ್ ಪಂದ್ಯಗಳ ಬಳಿಕ ಪಾಕಿಸ್ತಾನ್ ಹಾಗೂ ಟೀಮ್ ಇಂಡಿಯಾ ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 10 ರಂದು ಮತ್ತೊಮ್ಮೆ ಮುಖಾಮುಖಿಯಾಗಲಿದೆ.
ಇನ್ನು ಸೂಪರ್-4 ಹಂತದಲ್ಲೂ ಎರಡು ತಂಡಗಳು ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಅಲಂಕರಿಸಿದರೆ ಫೈನಲ್ ಪ್ರವೇಶಿಸಲಿದೆ. ಅದರಂತೆ ಸೆಪ್ಟೆಂಬರ್ 17 ರಂದು ಮೂರನೇ ಬಾರಿ ಮುಖಾಮುಖಿಯಾಗಬಹುದು.
ಅಂದರೆ ಕೇವಲ 15 ದಿನಗಳ ನಡುವೆ ಭಾರತ-ಪಾಕಿಸ್ತಾನ್ ನಡುವಣ ಮೂರು ಬಾರಿ ಮುಖಾಮುಖಿಯಾಗುವ ಸಾಧ್ಯತೆಯಿದೆ. ಅದರಂತೆ ಈ ಬಾರಿಯ ಏಷ್ಯಾಕಪ್ನಲ್ಲಿ 3 ಬಾರಿ ಇಂಡೊ-ಪಾಕ್ ನಡುವಣ ಹೈವೋಲ್ಟೇಜ್ ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರಕಲಿದೆಯಾ ಕಾದು ನೋಡಬೇಕಿದೆ.5 / 7


- ವಿರಾಟ್ ಕೊಹ್ಲಿ RCB ಯಲ್ಲಿ ಮತ್ತೆ ನಾಯಕನಾಗಿ ಮರಳಲು ಸಜ್ಜು – IPL 2025 ಗೆ ಮುಹೂರ್ತ - October 30, 2024
- ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ರಾಜ್ಯದಲ್ಲಿ ಮತ್ತೆ ನರ್ಸಿಂಗ್ ಸೀಟುಗಳು ಖಾಲಿ! ಭರ್ತಿಗೆ ಅದೇಶ ನೀಡಿದ ಸರ್ಕಾರ - April 24, 2024
- ಕರ್ನಾಟಕದಲ್ಲಿ 500+ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ! ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ. - March 28, 2024