ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದ ಸಮಯ, ಲೈವ್ ಸ್ಟ್ರೀಮಿಂಗ್, ಲೈವ್ ಟೆಲಿಕಾಸ್ಟ್ ವಿವರದ ಕುರಿತು ಇಲ್ಲಿದೆ ಮಾಹಿತಿ.
ind vs pak asia cup 2023 streaming
Crickbuzz ಲೈವ್ ಕ್ರಿಕೆಟ್ ಸ್ಕೋರ್
ಏಕದಿನ ಕ್ರಿಕೆಟ್ ಮಾದರಿಯ ಏಷ್ಯಾಕಪ್ ಟೂರ್ನಿಯ (Asia Cup 2023) ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಸಾಂಪ್ರದಾಯಿಕ ಎದುರಾಳಿ ತಂಡಗಳು ಸೆಪ್ಟೆಂಬರ್ 2ರಂದು ಶ್ರೀಲಂಕಾದ ಪಲ್ಲೆಕೆಲೆ ಕ್ರಿಕೆಟ್ ಮೈದಾನದಲ್ಲಿ ಕಾದಾಟ ನಡೆಸಲು ಭರ್ಜರಿ ಸಿದ್ಧತೆ ಮಾಡಿಕೊಂಡಿವೆ. ಮಧ್ಯಾಹ್ನ 3 ಗಂಟೆಗೆ ಪಂದ್ಯ ಆರಂಭವಾಗಲಿದೆ.
ಈಗಾಗಲೇ ಉದ್ಘಾಟನಾ ಪಂದ್ಯದಲ್ಲಿ ಗೆದ್ದಿರುವ ಪಾಕ್, ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದರೆ, ಮತ್ತೊಂದೆಡೆ ಭಾರತ, ಪಾಕ್ ತಂಡವನ್ನ ಬಗ್ಗು ಬಡಿದು ಏಷ್ಯಾಕಪ್ ಅಭಿಯಾನ ಆರಂಭಿಸಲು ತುದಿಗಾಲಲ್ಲಿ ನಿಂತಿದೆ. ಉಭಯ ತಂಡಗಳ ಹೈವೋಲ್ಟೇಜ್ ಕದನ ಕಣ್ತುಂಬಿಕೊಳ್ಳಲು ಉಭಯ ಕ್ರಿಕೆಟ್ ಪ್ರೇಮಿಗಳು ಕಾದು ಕುಳಿತಿದ್ದಾರೆ.
ಕಳೆದ ವರ್ಷದ ಟಿ20 ವಿಶ್ವಕಪ್ ಬಳಿಕ ಮುಖಾಮುಖಿಯಾಗುತ್ತಿರುವ ಉಭಯ ತಂಡಗಳು ರೋಚಕತೆ ಹೆಚ್ಚಿಸಿವೆ. ಜೊತೆಗೆ ಯಾರು ಗೆಲ್ತಾರೆ ಎಂಬ ಕುತೂಹಲ ಜೋರಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಗೆದ್ದಿರುವ ಪಾಕ್, 2ನೇ ಗೆಲುವಿಗೆ ಕಾತರಿಸುತ್ತಿದೆ. ಮತ್ತೊಂದೆಡೆ ಭಾರತ ಗೆಲುವಿನೊಂದಿಗೆ ಶುಭಾರಂಭ ಮಾಡುವ ಸಂಕಲ್ಪ ತೊಟ್ಟಿದೆ.
ಟೂರ್ನಿ ಇತಿಹಾಸದಲ್ಲಿ ಉಭಯ ತಂಡಗಳು ಒಟ್ಟು 16 ಬಾರಿ ಮುಖಾಮುಖಿಯಾಗಿವೆ. ಆದರೆ ಭಾರತವೇ ಮೇಲುಗೈ ಸಾಧಿಸಿದೆ. ಭಾರತ 9 ಪಂದ್ಯಗಳಲ್ಲಿ ಗೆದ್ದಿದೆ. ಪಾಕಿಸ್ತಾನ 6 ಪಂದ್ಯಗಳಲ್ಲಿ ಜಯಿಸಿದೆ. ಒಂದು ಪಂದ್ಯ ಡ್ರಾ ಸಾಧಿಸಿದೆ. ಪಂದ್ಯದ ಸಮಯ, ಲೈವ್ ಸ್ಟ್ರೀಮಿಂಗ್, ಲೈವ್ ಟೆಲಿಕಾಸ್ಟ್ ವಿವರದ ಕುರಿತು ಇಲ್ಲಿದೆ ಮಾಹಿತಿ.
ಭಾರತ-ಪಾಕ್ ಪಂದ್ಯ ಯಾವಾಗ, ಎಷ್ಟು ಗಂಟೆಗೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯ ಸೆಪ್ಟೆಂಬರ್ 2, ಶನಿವಾರ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 2.30ಕ್ಕೆ ಟಾಸ್ ಪ್ರಕ್ರಿಯೆ ಜರುಗಲಿದೆ. ಶ್ರೀಲಂಕಾದ ಪಲ್ಲೆಕೆಲ್ಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಯಾವ ಚಾನೆಲ್ನಲ್ಲಿ ನೇರಪ್ರಸಾರ ವೀಕ್ಷಿಸಬಹುದು?
ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ನೀವು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ಈ ಪಂದ್ಯವನ್ನು ಲೈವ್ ಆಗಿ ವೀಕ್ಷಿಸಬಹುದು.
ಪಂದ್ಯದ ಉಚಿತ ವೀಕ್ಷಣೆಗೆ ಹೇಗೆ?
ಪಂದ್ಯವು ಡಿಸ್ನಿ+ ಹಾಟ್ಸ್ಟಾರ್ ಒಟಿಟಿ ಪ್ಲಾಟ್ಫಾರ್ಮ್ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯ ಇರಲಿದೆ. ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ನೀವು ಸಂಪೂರ್ಣ ಉಚಿತವಾಗಿ ವೀಕ್ಷಿಸಬಹುದು.
ಭಾರತ ಸಂಭಾವ್ಯ ತಂಡ
ಶುಭ್ಮನ್ ಗಿಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್/ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ ಸಂಭಾವ್ಯ ತಂಡ
ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಇಮಾಮ್ ಉಲ್ ಹಕ್, ಮೊಹಮ್ಮದ್ ರಿಜ್ವಾನ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಘಾ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಶಾ ಆಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.