ಭಾಗ್ಯದಾ ಲಕ್ಷ್ಮಿ ಬಾರಮ್ಮ ಹಾಡಿನ ವಿವರಗಳು
ಹಾಡು : ಭಾಗ್ಯದ ಲಕ್ಷ್ಮಿ ಬಾರಮ್ಮ
ಗಾಯಕಿ: ಸೂರ್ಯಗಾಯತ್ರಿ
ಸಾಹಿತ್ಯ : ಪುರಂದರ ದಾಸರು
ತಾರಾಗಣ : ಸೂರ್ಯಗಾಯತ್ರಿ
ಸಂಗೀತ: ಕುಲದೀಪ್ ಎಂ ಪೈ
ಸಂಗೀತ ಲೇಬಲ್: ಕುಲದೀಪ್ ಎಂ ಪೈ

Bhagyada Lakshmi Baramma Lyrics in Kannada
|| ಭಾಗ್ಯದ ಲಕ್ಷ್ಮಿ ಬಾರಮ್ಮ ||
ಭಾಗ್ಯದ ಲಕ್ಷ್ಮೀ ಬಾರಮ್ಮ |
ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮೀ ಬಾರಮ್ಮ ||
ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ
ಗೆಜ್ಜೆ ಕಾಲ್ಗಳ ಧ್ವನಿಯ ತೋರುತ |
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ || ೧ ||
ಭಾಗ್ಯದ ಲಕ್ಷ್ಮೀ ಬಾರಮ್ಮ ||
ಕನಕವೃಷ್ಟಿಯ ಕರೆಯುತ ಬಾರೆ
ಮನಕಾಮನೆಯ ಸಿದ್ಧಿಯ ತೋರೆ |
ದಿನಕರ ಕೋಟಿ ತೇಜದಿ ಹೊಳೆಯುವ
ಜನಕರಾಯನ ಕುಮಾರಿ ಬೇಗ || ೨ ||
ಭಾಗ್ಯದ ಲಕ್ಷ್ಮೀ ಬಾರಮ್ಮ ||
ಅತ್ತಿತ್ತಲಗದೆ ಭಕ್ತರ ಮನೆಯಲಿ
ನಿತ್ಯ ಮಹೋತ್ಸವ ನಿತ್ಯ ಸುಮಂಗಳ |
ಸತ್ಯವ ತೋರುವ ಸಾಧು ಸಜ್ಜನರ
ಚಿತ್ತದಿ ಹೊಳೆಯುವ ಪುತ್ಥಳಿ ಬೊಂಬೆ || ೩ ||
ಭಾಗ್ಯದ ಲಕ್ಷ್ಮೀ ಬಾರಮ್ಮ ||
ಸಂಖ್ಯೆಯಿಲ್ಲದ ಭಾಗ್ಯವ ಕೊಟ್ಟು
ಕಂಕಣ ಕೈಯ ತಿರುವುತ ಬಾರೆ |
ಕುಂಕುಮಾಂಕಿತೆ ಪಂಕಜಲೋಚನೆ
ವೆಂಕಟರಮಣನ ಬಿಂಕದ ರಾಣಿ || ೪ ||
ಭಾಗ್ಯದ ಲಕ್ಷ್ಮೀ ಬಾರಮ್ಮ ||
ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದ ಪೂಜೆಯ ವೇಳೆಗೆ |
ಅಕ್ಕರೆಯುಳ್ಳ ಅಳಗಿರಿ ರಂಗನ
ಚೊಕ್ಕ ಪುರಂದರ ವಿಠ್ಠಲನ ರಾಣಿ || ೫ ||
ಭಾಗ್ಯದ ಲಕ್ಷ್ಮೀ ಬಾರಮ್ಮ ||
PDF ಕನ್ನಡದಲ್ಲಿ ಭಾಗ್ಯದಾ ಲಕ್ಷ್ಮಿ ಬಾರಮ್ಮ ಸಾಹಿತ್ಯ
- ವಿರಾಟ್ ಕೊಹ್ಲಿ RCB ಯಲ್ಲಿ ಮತ್ತೆ ನಾಯಕನಾಗಿ ಮರಳಲು ಸಜ್ಜು – IPL 2025 ಗೆ ಮುಹೂರ್ತ - October 30, 2024
- ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ರಾಜ್ಯದಲ್ಲಿ ಮತ್ತೆ ನರ್ಸಿಂಗ್ ಸೀಟುಗಳು ಖಾಲಿ! ಭರ್ತಿಗೆ ಅದೇಶ ನೀಡಿದ ಸರ್ಕಾರ - April 24, 2024
- ಕರ್ನಾಟಕದಲ್ಲಿ 500+ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ! ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ. - March 28, 2024