rtgh

ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ


ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯ ಸರ್ಕಾರದ  ಮಹತ್ವಕಾಂಕ್ಷಿಯ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಗೆ ಬಜೆಟ್‌ ಗಾತ್ರದ  ಶೇ. 14 ರಷ್ಟು ಅಂದರೆ 52 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಇದರ ಬಗ್ಗೆ ನಾವು ನಿಮಗೆ ಹೆಚ್ಚಿನ ಮಾಹಿತಿಯನ್ನು ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ.

Congress Guarantee Schemes

2024-25ನೇ ಸಾಲಿನ ಮುಂಗಡ ಪತ್ರದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿತ್ತೀಯ ಕೊರತೆ 82,981 ಕೋಟಿ ರೂಪಾಯಿಗಳಷ್ಟಿದ್ದು, ರಾಜ್ಯದ ಜಿಎಸ್‌ಡಿಪಿ ಯ 2.95% ರಷ್ಟಿದೆ. ಇದು ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ 2002ರಲ್ಲಿ ನಿಗದಿಪಡಿಸಿರುವ ಶೇ.3 ರ ಮಿತಿಯೊಳಗಿದ್ದು, ವಿತ್ತೀಯ ಶಿಸ್ತು ಪಾಲಿಸಲಾಗಿದೆ ಎಂದರು.

ಕರ್ನಾಟಕದಲ್ಲಿ ರಾಜಸ್ವ ಕೊರತೆ 27,354 ಕೋಟಿ ರೂ.ಇದ್ದು, 0.97% ರಷ್ಟಿದೆ. 1,05,246 ಕೋಟಿ ಹೊಣೆಗಾರಿಕೆಗಳಿದ್ದು, ಜಿಎಸ್‌ಡಿಪಿಯ ಶೇ.23.68ರಷ್ಟಿದೆ. ಮುಂದಿನ ವರ್ಷದಿಂದ ರಾಜಸ್ವ ಹೆಚ್ಚಳವು (Revenue Surplus) ಸ್ಥಿರಗೊಳ್ಳಲಿದೆ ಎಂದು ಹೇಳಿದ್ದಾರೆ.

ಅದೇ ರೀತಿ 2017-2018 ರಿಂದ ಇಲ್ಲಿಯ ವರೆಗೆ 1,87,000 ಲಕ್ಷ ಕೋಟಿ ರೂಪಾಯಿಗಳು ರಾಜಕ್ಕೆ ಬಂದಿದ್ದರೆ ರಾಜ್ಯದ ಅಭಿವೃದ್ಧಿಯಾಗುತ್ತಿತ್ತು. 6 ವರ್ಷಗಳಲ್ಲಿ 62,000 ಕೋಟಿ ರೂ. ಹಂಚಿಕೆಯಲ್ಲಿ ಅನ್ಯಾಯವಾಗಿದೆ. ಕೇಂದ್ರದಿಂದ ನ್ಯಾಯಯುತ ಪಾಲು ಬರದಿದ್ದರೂ ಕೂಡ ಆರ್ಥಿಕವಾಗಿ ಸುಭದ್ರವಾಗಿದ್ದೇವೆ. ಗ್ಯಾರಂಟಿಗಳಿಗೆ ರೂ.52,009 ಕೋಟಿ ಅಂದಾಜಿಸಲಾಗಿದೆ. ಇದಕ್ಕೂ ಹೆಚ್ಚು ಹಣ ಬೇಕಾದಲ್ಲಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಸಹ ಒದಿ: ಕೋಳಿ ತಿನ್ನುವವರಿಗೆ ಸರ್ಕಾರದಿಂದ ಖಡಕ್ ಎಚ್ಚರಿಕೆ..!‌ ಇನ್ಮುಂದೆ ಚಿಕನ್‌ ಮಾರಾಟ ಬಂದ್

ಉತ್ತರ ಪ್ರದೇಶ ರಾಜ್ಯದಿಂದ 49% ತೆರಿಗೆ  ಹೋದರೆ ಕೇಂದ್ರದಿಂದ ಸ್ವೀಕೃತಿ ರೂ.3,12,280 ಕೋಟಿ ಬರುತ್ತದೆ. ಕರ್ನಾಟಕದಿಂದ 77 % ತೆರಿಗೆ ಕೇಂದ್ರಕ್ಕೆ ಹೋದರೆ ಮುಂದಿನ ವರ್ಷಕ್ಕೆ ರಾಜ್ಯಕ್ಕೆ ಕೇವಲ 59,785 ರೂಪಾಯಿ. ಅಂದರೆ ಕೇವಲ 23% ಬರುತ್ತದೆ. ರಾಜಸ್ಥಾನ, ಉತ್ತರಪ್ರದೇಶ, ಮದ್ಯಪ್ರದೇಶ ರಾಜ್ಯಗಳಿಗೆ ಹೆಚ್ಚಿನ ಅನುದಾನವನ್ನು ನೀಡಲು ನಮಗೆ ವಿರೋಧವಿಲ್ಲ. ಆದರೆ ಚಿನ್ನದ ಮೊಟ್ಟೆ ಇಡುವ ಕೋಳಿಯನ್ನು ಕತ್ತರಿಸಿದಂತೆ, ಕೇಂದ್ರ Bharatiya Janata Party (BJP) ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಬಾರದು ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಪ್ರತಿಯೊಬ್ಬರಿಗೆ ವಾರ್ಷಿಕವಾಗಿ ಸಾರ್ವತ್ರಿಕ ಮೂಲ ಆದಾಯದಂತೆ 50 ರಿಂದ 55 ಸಾವಿರ ರೂ. ಸಿಗುತ್ತದೆ. 155 ಕೋಟಿ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಿದರೆ, ವಿದ್ಯುತ್ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ, ಅನ್ನಭಾಗ್ಯದಡಿ ಉಚಿತ ಅಕ್ಕಿ ಬದಲು ಹಣ ಕೊಡುತ್ತಿದ್ದೇವೆ, 1.17 ಲಕ್ಷ ಮಹಿಳೆಯರಿಗೆ ಭಾಗ್ಯ ಲಕ್ಷ್ಮಿ ಯೋಜನೆಯಡಿ 2,000 ರೂ. ತಿಂಗಳಿಗೆ ನೀಡಿದರೆ, ಅದನ್ನು ಬಿಟ್ಟಿ ಭಾಗ್ಯ ಎಂದು ಬಡವರಿಗೆ ಅವಮಾನಿಸಿದ್ದಾರೆ ಎಂದು ಅವರು ಹೇಳಿದರು.

ನಮ್ಮ ಆಯವ್ಯಯವು ಎಲ್ಲರನ್ನೂ ಒಳಗೊಂಡ ಸಾಮಾಜಿಕ ನ್ಯಾಯದ ಆಧಾರದ ಮೇಲೆ ರಚಿತವಾಗಿದೆ. ಎಲ್ಲ ಜಾತಿ, ಧರ್ಮಗಳು, ಸೇರಿದಂತೆ ಎಲ್ಲರಿಗೂ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಲಿ ಎಂದು ಗ್ಯಾರಂಟಿ ಕಾರ್ಯಕ್ರಮ ಜಾರಿ ಮಾಡಲಾಗಿದೆ. ದೂರದೃಷ್ಟಿಯಿರುವ, ಎಲ್ಲರನ್ನೂ ಒಳಗೊಂಡ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಆಯವ್ಯಯ ಇದಾಗಿದೆ ಎಂದು ಅವರು ತಿಳಿಸಿದರು.

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆ ನಿಷೇಧ!! ರಾಜ್ಯ ಸರ್ಕಾರದ ಹೊಸ ಆದೇಶ

ಉಚಿತ ಸ್ಮಾರ್ಟ್ ಫೋನ್ ವಿತರಣೆ ಘೋಷಣೆ ಮಾಡಿದ ಸಿದ್ದರಾಮಯ್ಯ! ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್


Leave a Reply

Your email address will not be published. Required fields are marked *