rtgh

BPL, APL ರೇಷನ್‌ ಕಾರ್ಡ್ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ | ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಣೆ


ಮನೆಗಳಿಗೆ ಸಬ್ಸಿಡಿ ದರದಲ್ಲಿ ಅಗತ್ಯ ಆಹಾರ ಪದಾರ್ಥಗಳು ಲಭ್ಯವಾಗುವಂತೆ ನೋಡಿಕೊಳ್ಳುವಲ್ಲಿ ಪಡಿತರ ಚೀಟಿಗಳು ಪ್ರಮುಖ ಪಾತ್ರವಹಿಸುತ್ತವೆ. ಈ ಕಾರ್ಡ್‌ಗಳನ್ನು ಬಡತನ ರೇಖೆಯ ಮೇಲೆ (ಎಪಿಎಲ್) ಮತ್ತು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ವರ್ಗಗಳಾಗಿ ವರ್ಗೀಕರಿಸಲಾಗಿದೆ, ಪ್ರತಿಯೊಂದೂ ನಿರ್ದಿಷ್ಟ ಸಾಮಾಜಿಕ ಆರ್ಥಿಕ ಗುಂಪುಗಳನ್ನು ಪೂರೈಸುತ್ತದೆ. ಲಕ್ಷಾಂತರ ಕುಟುಂಬಗಳ ಆಹಾರ ಭದ್ರತೆಯ ಮೇಲೆ ನೇರವಾಗಿ ಪರಿಣಾಮ ಬೀರುವುದರಿಂದ ಈ ಕಾರ್ಡ್‌ಗಳ ನಿಖರತೆಯನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ನಮ್ಯತೆ ಮತ್ತು ನ್ಯಾಯಸಮ್ಮತತೆಯ ಅಗತ್ಯವನ್ನು ಗುರುತಿಸಿ, ಅಧಿಕಾರಿಗಳು ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿಗಳ ತಿದ್ದುಪಡಿಯ ಅವಧಿಯನ್ನು ವಿಸ್ತರಿಸಿದ್ದಾರೆ.

Extension of period for correction of APL and BPL ration card
Extension of period for correction of APL and BPL ration card

ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಸಿಹಿಸುದ್ದಿನೀಡಿದ್ದು, ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೊಮ್ಮೆ ಪಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಅಕ್ಟೋಬರ್ 16 ರಿಮದ 21 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಿದೆ.

ಅ.16 ರಿಂದ 18 ರವರೆಗೆ ಈ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ

ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ

ಅ. 19 ರಿಂದ 21 ರವರೆಗೆ ಈ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ

ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ

ಈ ಹಿಂದೆ ಆಹಾರ ಇಲಾಖೆ ಅ.5 ರಿಂದ 13ರವರೆಗೆ ತಿದ್ದುಪಡಿ ಮಾಡಿಕೊಳ್ಳಲು ಕಾಲಾವಕಾಶ ನೀಡಿತ್ತು. ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ ನೀಡಿದೆ.


Leave a Reply

Your email address will not be published. Required fields are marked *