ಶಾಲಾ ವಿದ್ಯಾರ್ಥಿಗಳು 8 ನೇ ತರಗತಿಗೆ ಹೊಸದಾಗಿ ಪ್ರವೇಶ ಪಡೆದ ವರ್ಷದ ಸಮಯ ಮತ್ತು ಕಲಿಕೆಯ ಹೊಸ ಚಕ್ರವನ್ನು ಪ್ರಾರಂಭಿಸುತ್ತದೆ. ಉತ್ಸಾಹ ಮತ್ತು ಉತ್ಸಾಹದ ಮುಖಗಳೊಂದಿಗೆ, ಈ ಯುವ ಮನಸ್ಸುಗಳು ಮುಂದಿನ ಶೈಕ್ಷಣಿಕ ವರ್ಷದ ಸವಾಲುಗಳನ್ನು ಸ್ವೀಕರಿಸಲು ಸಿದ್ಧವಾಗಿವೆ.

ರಾಜ್ಯದಲ್ಲಿ Congress ಸರಕಾರ ಹೊಸ ಯೋಜನೆಗಳನ್ನು ನೀಡುತ್ತಿದೆ. Congress ನ ಉಚಿತ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯ ಸರ್ಕಾರ ಇದೀಗ ಸಹಲ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೂಡ ವಿವಿಧ ಸೌಲಭ್ಯವನ್ನು ನೀಡುತ್ತಿದೆ.
ಈಗಾಗಲೇ ರಾಜ್ಯ ಸರ್ಕಾರ ಅರ್ಹ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ಅನ್ನು ನೀಡುವ ಮೂಲಕ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸಲು ಮುಂದಾಗಿದೆ. ಸದ್ಯ ಉಚಿತ ಲ್ಯಾಪ್ ಟಾಪ್ ಬೆನ್ನಲ್ಲೇ ರಾಜ್ಯ ಸರ್ಕಾರ ಸರ್ಕಾರೀ ಶಾಲಾ ಮಕ್ಕಳಿಗೆ ಹೊಸ ಸೌಲಭ್ಯವನ್ನು ನೀಡುವುದಾಗಿ ಘೋಷಣೆ ಹೊರಡಿಸಿದೆ. ಈ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.
ಸರ್ಕಾರೀ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ನ್ಯೂಸ್
ರಾಜ್ಯದಲ್ಲಿ ಈ ಬಾರಿ ಶಿಕ್ಷಣದಲ್ಲಿ ಸಾಕಷ್ಟು ಬದಲಾವಣೆಯನ್ನು ಕಂಡುಕೊಳ್ಳಲಾಗಿದೆ. 2023 -24 ರ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಶಾಲಾ ವಿದ್ಯಾರ್ಥಿಗಳ ಓದುವ ವಿಷಯದಿಂದ ಹಿಡಿದು, ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯಲ್ಲಿ ಕೂಡ ಈ ಬಾರಿ ಹೊಸ ಹೊಸ ನಿಯಮ ಅನ್ವಯವಾಗಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವುದು ಸರ್ಕಾರ ಗುರಿಯಾಗಿದೆ. ಸದ್ಯ ರಾಜ್ಯದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ನೀಡಿದ್ದಾರೆ.
ಫ್ರೀ ಸೈಕಲ್ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಇನ್ನು ಶಾಲಾ ವಿದ್ಯಾರ್ಥಿಗಳು 8 ನೇ ತರಗತಿಗೆ ಹೊಸದಾಗಿ ಸೇರ್ಪಡೆಯಾದಾಗ ಫ್ರೀ ಸೈಕಲ್ ನ ನಿರೀಕ್ಷೆಯಲ್ಲಿರುತ್ತಾರೆ. ಇದೀಗ ಫ್ರೀ ಸೈಕಲ್ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಸರ್ಕಾರ ಗುಡ್ ನೀಡಿದೆ.
ಮುಂದಿನ ವರ್ಷದಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ಅನ್ನು ನೀಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಹೊರಡಿಸಿದ್ದಾರೆ. ಸದ್ಯ ಶಾಲೆಗಳು ಆರಂಭವಾಗಿ ಮೂರ್ನಾಲ್ಕು ತಿಂಗಳು ಕಳೆದಿರುವುದರಿಂದ ಈ ಬಾರಿ ಉಚಿತ ಸೈಕಲ್ ನೀಡಲು ಆಗುತ್ತಿಲ್ಲ. ಹೀಗಾಗಿ ಮುಂದಿನ ವರ್ಷದಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ನೀಡಲಾಗುತ್ತದೆ ಎಂದು ಅಧಿಕೃತ ಘೋಷಣೆ ಹೊರಡಿಸಿದ್ದಾರೆ.
- ವಿರಾಟ್ ಕೊಹ್ಲಿ RCB ಯಲ್ಲಿ ಮತ್ತೆ ನಾಯಕನಾಗಿ ಮರಳಲು ಸಜ್ಜು – IPL 2025 ಗೆ ಮುಹೂರ್ತ - October 30, 2024
- ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ರಾಜ್ಯದಲ್ಲಿ ಮತ್ತೆ ನರ್ಸಿಂಗ್ ಸೀಟುಗಳು ಖಾಲಿ! ಭರ್ತಿಗೆ ಅದೇಶ ನೀಡಿದ ಸರ್ಕಾರ - April 24, 2024
- ಕರ್ನಾಟಕದಲ್ಲಿ 500+ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ! ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ. - March 28, 2024
Leave a Reply