rtgh

Breaking News.! ‘ಗೃಹಲಕ್ಷ್ಮಿ’ ಯೋಜನೆ ನೋಂದಣಿ ‘ತಾತ್ಕಾಲಿಕ’ವಾಗಿ ಸ್ಥಗಿತ – ಮಹಿಳೆಯರಿಗೆ ಶಾಕ್‌ ಕೊಟ್ಟ ಸರ್ಕಾರ. ಇಲ್ಲಿಗೆ ಕ್ಲೋಸ್ ಅಗತ್ತಾ ಗೃಹ ಲಕ್ಷ್ಮಿ?


Hello ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವಿಟರ್‌ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.

Ghrilakshmi scheme registration halted temporarily information in kannada
Ghrilakshmi scheme registration halted temporarily information in kannada

ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಚಾರಿತ್ರಿಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿದೆ. ಈ ನಡುವೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗದೇ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು ಅಥವಾ ಸ್ವಯಂಸೇವಕ ‘ಪ್ರಜಾಪ್ರತಿನಿಧಿಗಳು’ ಮನೆ ಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡುತ್ತಾರೆ.

ಇನ್ನು ಓದಿ: ಇನ್ಮುಂದೆ ಕಾರ್ಡ್ ಇಲ್ಲದೆಯೂ ATMನಿಂದ ಹಣ ಪಡೆಯಬಹುದು! ಮೊಬೈಲ್ ಮೂಲಕ ಎಟಿಎಂಗಳಿಂದ ಹಣ ಡ್ರಾ.

ಶೀಘ್ರವೇ ಗೃಹಲಕ್ಷ್ಮೀ ಯೋಜನೆಗೆ ನೋಂದಣಿಯನ್ನು ಪ್ರಾರಂಭ

ರಾಜ್ಯದ ಯಜಮಾನಿ ಮಹಿಳೆಯರು ಯಾವುದೇ ಗೊಂದಲಕ್ಕೆ ಒಳಗಾಗ ಬಾರದು. ಸದ್ಯಕ್ಕೆ ತಾತ್ಕಾಲಿಕವಾಗಿ ಗೃಹಲಕ್ಷ್ಮೀ ಯೋಜನೆ ನೋಂದಣಿಯನ್ನು ನಿಲ್ಲಿಸಲಾಗಿದೆ. ಶೀಘ್ರವೇ ಗೃಹಲಕ್ಷ್ಮೀ ಯೋಜನೆಗೆ ನೋಂದಣಿಯನ್ನು ಪ್ರಾರಂಭಿಸಲಾಗುತ್ತದೆ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದರು.

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023. ಅ.15 ರಂದು ಭಾರತ-ಪಾಕಿಸ್ತಾನ ಪಂದ್ಯ, ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ!

ಈಗಾಗಲೇ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿ

ಈಗಾಗಲೇ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಗೊಂದಲವಾಗದಿರಲಿ ಎಂದು ರಾಜ್ಯ ಸರ್ಕಾರ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ನೋಂದಾಯಿತ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಆದ ನಂತರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪುನಾರಂಭಗೊಳ್ಳಲಿದೆ ಎಂದು ಹೇಳಿದರು.

ನೋಂದಣಿಗೆ ಅಂತಿಮ ಗಡುವು ಇಲ್ಲ

ಇನ್ನು ಈ ಹಿಂದೆ ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಯಾವುದೇ ಅಂತಿಮ ದಿನಾಂಕ (ಡೆಡ್ ಲೈನ್)  ನೀಡಲಾಗಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಹೇಳಿತ್ತು. ಆದರೆ, ಈಗ ಯೋಜನೆಗೆ ಮಹಿಳೆಯರು ನೋಂದಣಿ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿರುವಾಗಲೇ ಸ್ಥಗಿತ ಮಾಡಲಾಗಿದೆ. ಈಗ ನೊಂದಣಿಯಾಗಿರುವವರ ಅಕೌಂಟ್ ಗೆ ಹಣ ಜಮೆಯಾದ ನಂತರ ಮತ್ತೆ ಹೊಸ ನೊಂದಣಿಗೆ ಅವಕಾಶ ನೀಡಲಾಗುವುದು ಎಂದು ಸರ್ಕಾರ ತಿಳಿಸದೆ.


Leave a Reply

Your email address will not be published. Required fields are marked *