rtgh

ರಾಷ್ಟ್ರಕವಿ ಎಂ ಗೋವಿಂದ ಪೈ ಅವರ ಪರಿಚಯ, ಪೈ ಜೀವನ ಚರಿತ್ರೆ, ಶಿಕ್ಷಣ, ಪ್ರಸಿದ್ಧ ಸಾಹಿತಿ, ಪೈ ರವರ ಕೃತಿಗಳು, ಗೌರವ/ಪುರಸ್ಕಾರ.


govinda pai information in kannada
govinda pai information in kannada

ರಾಷ್ಟ್ರಕವಿ ಗೋವಿಂದ ಪೈ ಎಂದೂ ಕರೆಯಲ್ಪಡುವ ಮಂಜೇಶ್ವರ ಗೋವಿಂದ ಪೈ ಮಂಜೇಶ್ವರ ಗೋವಿಂದ ಪೈ ಒಬ್ಬ ಕನ್ನಡ ಕವಿ. ಅವರಿಗೆ ಮದ್ರಾಸ್ ಸರ್ಕಾರದಿಂದ ಮೊದಲ ರಾಷ್ಟ್ರಕವಿ ಬಿರುದನ್ನು ನೀಡಲಾಯಿತು. ಕಾಸರಗೋಡು ಜಿಲ್ಲೆಯು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆಯ ಮೊದಲು ಮದ್ರಾಸ್ ರಾಜ್ಯದ ದಕ್ಷಿಣ ಕನರ ಜಿಲ್ಲೆಯ ಭಾಗವಾಗಿತ್ತು. ರಾಷ್ಟ್ರಕವಿ ಎಂ.ಗೋವಿಂದ ಪೈ ಅವರು ಭಾರತದ ಸಾಹಿತ್ಯ ನಕ್ಷೆಗಳಲ್ಲಿ ಮಂಜೇಶ್ವರರನ್ನು ಇರಿಸಿದವರು.

ಗೋವಿಂದ ಪೈ ರವರ ಜೀವನ

ಎಂ. ಗೋವಿಂದ ಪೈ ಅವರು ಮಂಗಳೂರಿನ ಸಾಹುಕಾರ ತಿಮ್ಮಪ್ಪ ಪೈ ಗಳು ಮತ್ತು ತಾಯಿ ದೇವಕಿಯಮ್ಮ. ತಾಯಿಯ ತೌರುಮನೆ ಮಂಜೇಶ್ವರ. ಅವರು ಕಾಸರಗೋಡು ತಾಲೂಕಿನ ಮಂಜೇಶ್ವರದ ಅಜ್ಜನ ಮನೆಯಲ್ಲಿ ಮಾರ್ಚ್ ೨೩, ೧೮೮೩ ರಂದು ಜನಿಸಿದರು. ಅವರ ತಂದೆ ತುಂಬ ಸ್ಥಿತಿವಂತರು ತಿಮ್ಮಪ್ಪ ಪೈ ಅವರ ಹಿರಿಯ ಮಗ. ಇವರಿಗೆ ಮೂವರು ತಮ್ಮಂದಿರು ಮತ್ತು ಮೂವರು ಸಹೋದರಿಯರಿರು. ಶ್ರೀಮಂತ ಮನೆತನದಲ್ಲಿ ಹುಟ್ಟಿದವರು.

ಗೋವಿಂದ ಪೈ ರವರ ಶಿಕ್ಷಣ

ಪ್ರಾಥಮಿಕ ಶಿಕ್ಷಣ ಮಂಗಳೂರುನಲ್ಲಿಯೇ ಆಯಿತು. ಪದವಿ ಪೂರ್ವದ ವಿದ್ಯಾಭ್ಯಾಸ ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ನಡೆಯಿತು. ಅವರ ಒಡನಾಡಿಗಳಲ್ಲಿ ಎಂ. ಎನ್. ಕಾಮತ್ ಒಬ್ಬರು. ಅವರಿಗೆ ಪಾಠ ಕಲಿಸಿದ ಗುರುವರ್ಯರಲ್ಲಿ ಪಂಜೆ ಮಂಗೇಶರಾಯರೂ ಒಬ್ಬರು. ಬಿ.ಎ ಪದವಿ ಶಿಕ್ಷಣಕ್ಕಾಗಿ 1903-1906ರವರೆಗೆ ಮದರಾ‌ಸ್ ನ( ಈಗಿನ ಚೆನ್ನೈಗೆ) ಕ್ರಿಶ್ಚಿಯನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಬೇಕಾಯಿತು. ಅಲ್ಲಿ ಡಾ.ಎಸ್. ರಾಧಾಕೃಷ್ಣನ್ ಅವರು ಇವರ ಸಹಪಾಠಿಯಾಗಿದ್ದರು. ತಂದೆಯ ಮರಣದಿಂದಾಗಿ ಬಿ.ಎ ಪದವಿ ಪರೀಕ್ಷೆಯ ಮಧ್ಯದಲ್ಲಿಯೇ ಅವರು ಮಂಗಳೂರಿಗೆ ಹಿಂತಿರುಗಬೇಕಾಯಿತು. ಹಿರಿಯ ಮಗನಾಗಿದ್ದರಿಂದ ಮನೆಯ ಜವಾಬ್ದಾರಿ ವಹಿಸಬೇಕಾಯಿತು. ಬಿ.ಎ ಪದವಿ ಪಡೆಯಲಾಗದಿದ್ದರೂ ಇಂಗ್ಲಿಷ್ ವಿಭಾಗದಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದುದರಿಂದ ಚಿನ್ನದ ಪದಕನ್ನು ಗಳಿಸಿದರು. ಅವರ ವ್ಯಾಸಂಗ ಅರ್ಧಕ್ಕೆ ನಿಂತರೂ ಅವರ ಅಧ್ಯಯನ ಮಾತ್ರ ನಿರಾತಂಕವಾಗಿ ಸಾಗಿತು. ಅವರು ತಮ್ಮ ತಾಯಿಯ ಊರಾದ ಮಂಜೇಶ್ವರದಲ್ಲಿ ಹುಟ್ಟಿದರು. ಆಕೆಯ ಮೂಲಕ ತಮಗೆ ದತ್ತವಾದ ಆಸ್ತಿಯನ್ನು ನೋಡಿಕೊಂಡು ಅಲ್ಲಿಯೇ ನೆಲೆಸಿದ್ದರಿಂದ ಅವರನ್ನು “ಮಂಜೇಶ್ವರದ ಗೋವಿಂದ ಪೈ” ಎಂದೇ ಕರೆಯುವುದು ರೂಢಿಯಾಯಿತು.

ಪ್ರಸಿದ್ಧ ಸಾಹಿತಿಯಾಗಿ ಗೋವಿಂದ ಪೈ

  • ತಂದೆಯವರ ಮರಣದ ನಂತರ ಹಿರಿಯ ಮಗನಾದ ಇವರ ಮೇಲೆ ಮನೆತನದ ಎಲ್ಲ ಜವಾಬ್ದಾರಿ ಬಿತ್ತು. ಬಿ.ಎ ಪದವಿ ಪೂರ್ಣಗೊಳಿಸಲಿಲ್ಲ. ಮನೆಯಲ್ಲಿಯೇ ಅಮೂಲ್ಯ ಗ್ರಂಥಗಳನ್ನು ತರಿಸಿ ಓದಿದರು. ಕಾಲೇಜಿನಲ್ಲಿದ್ದಾಗ ಲ್ಯಾಟಿನ್ , ಫ್ರೆಂಚ್, ಸಂಸ್ಕ್ಕತ, ಪಾಳಿ, ಬಂಗಾಲಿ, ಭಾಷೆಗಳ ನ್ನು ಅಭ್ಯಸಿಸಿದ್ದರು. ಮನೆಯಲ್ಲಿ ಇನ್ನೂ ಹಲವು ಭಾಷೆಗಳನ್ನು ಅಭ್ಯಸಿಸಿ ಬಹುಭಾಷಾ ಪ್ರವೀಣರಾಗಿದ್ದರು. ಇವರ ಗ್ರಂಥಾಲಯದಲ್ಲಿ ೪೩ ಭಾಷೆಗಳ ಸಾವಿರಾರು ಗ್ರಂಥ ಸಂಗ್ರಹವಿತ್ತು. ಇವರ ಮಾತೃಭಾಷೆ ಕೊಂಕಣಿ, ಪರಿಸರದ ಭಾಷೆ ತುಳು, ರಕ್ತಗತವಾದ ಭಾಷೆ ಕನ್ನಡ.
  • ಕಲಿತದ್ದು ಇಂಗ್ಲೀಷಿನಲ್ಲಿ. ಮಲೆಯಾಳ ಮತ್ತು ತಮಿಳು ಆಜು ಬಾಜು ಭಾಷೆಗಳಾಗಿದ್ದವು. ಮರಾಠಿ ಗುಜರಾತಿ ಜರ್ಮನ್ ಗ್ರೀಕ್ ಮೊದಲಾದವು ಆಸಕ್ತ ಭಾಷೆಗಳಾಗಿದ್ದವು. ಮರಾಠಿ, ಜರ್ಮನ್ ಗ್ರೀಕ್ ಮೊದಲಾದ ಭಾಷೆಗಳನ್ನು ಕಲಿತು ಒಟ್ಟು ೨೫ ಭಾಷೆಗಳಲ್ಲಿ ಪ್ರಾವಿಣ್ಯತೆ ಪಡೆದು ಕೊಂಡಿದ್ದರು. ಗೋವಿಂದ ಪೈಯವರು ನಂತರ ಮಂಜೇಶ್ವರದಲ್ಲಿ ನೆಲಸಿದ್ದರಿಂದ ಮಂಜೇಶ್ವರ ಗೋವಿಂದ ಪೈ ಎಂದೇ ಹೆಸರು ಗಳಿಸಿದರು.
  • ಗೋವಿಂದ ಪೈಗಳು ‘ಗಿಳಿವಿಂಡು’, ‘ನಂದಾದೀಪ’ ಎಂಬ ಕಾವ್ಯ ಸಂಕಲನಗಳನ್ನು ಹೊರ ತಂದಿದ್ದಾರೆ. ‘ವೈಶಾಖಿ’ ಹಾಗು ‘ಗೊಲ್ಗೊಥಾ’ ಎನ್ನುವ ಎರಡು ಖಂಡಕಾವ್ಯಗಳನ್ನು ಬರೆದಿದ್ದಾರೆ ‘ಹೆಬ್ಬೆರೆಳು’ ಎನ್ನುವ ಪದ್ಯಗಳನ್ನು ಒಳಗೊಂಡ ಏಕಾಂಕ ನಾಟಕವನ್ನೂ, ‘ಚಿತ್ರಭಾನು’ ಎನ್ನುವ ಗದ್ಯನಾಟಕವನ್ನೂ ಬರೆದಿದ್ದಾರೆ. ‘ತಾಯಿ‘, ‘ಕಾಯಾಯ್ ಕೊಮಾಜಿ’ ಎಂಬ ಸಾಮಾಜಿಕ ನಾಟಕಗಳನ್ನು ಬರೆದದ್ದಲ್ಲದೆ, ಜಪಾನಿನ ನೋ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.
    ಅವರ ‘ಕನ್ನಡದ ಮೊರೆ’ ಎಂಬ ಪ್ರಬಂಧ ಸಂಕಲನದಲ್ಲಿ ಅವರು ಬರೆದ ಹಲವು ವ್ಯಕ್ತಿ ಚಿತ್ರಗಳು, ಆತ್ಮಕಥನಗಳು ಮತ್ತು ಭಾಷಣಗಳು ಅಡಕವಾಗಿವೆ. ಪ್ರಬಂಧರೂಪದಲ್ಲಿ ಅವರ ‘ಆತ್ಮಕಥನ’ ಮೂಡಿಬಂದಿದೆ. ಲೇಖಕನ ಕಷ್ಟನಿಷ್ಟುರಗಳನ್ನು ವರ್ಣಿಸುವ ‘ಬರಹಗಾರನ ಹಣೆಬರಹ’.
    ತಮ್ಮ ಗುರುಗಳಾದ ಪಂಜೆಯವರಲ್ಲಿದ್ದ ಪೂಜ್ಯಭಾವದ ಪ್ರತೀಕದಂತಿರುವ ‘ಕನಸಾದ ನನಸು’, ಒಡನಾಡಿಗಳಾದ ಎಂ.ಎನ್. ಕಾಮತ್, ಕಿಲ್ಲೆ ಅವರ ಸ್ನೇಹದ ಬಗ್ಗೆ ಬರೆದಿರುವ ಅವರ ಬರಹಗಳು, ಎಂ.ಆರ್. ಶ್ರೀನಿವಾಸಮೂರ್ತಿಗಳಿಗೆ ನೆನಪು, ಬೇಂದ್ರೆಯವರಿಗೆ ಐವತ್ತು ದಾಟಿದ್ದಕ್ಕೆ ಸಲ್ಲಿಸಿದ ಹರಕೆ ಇವು ಅವರ ಇನ್ನಿತರ ಪ್ರಬಂಧಗಳಾಗಿವೆ.

ಚಿಕ್ಕ ವಯಸ್ಸಿನಲ್ಲಿಯೇ ಕವಿಯಾಗಿದ್ದರು :

  • ಇನ್ನೂ ಎಂಟನೆಯ ತರಗತಿಯಲ್ಲಿರುವಾಗಲೇ ಬರೆದ ಮೂರು ಕವನಗಳು ಬಹುಮಾನ ಗಳಿಸಿದ್ದವು, ಮತ್ತು “ಸುವಾಸಿನಿ” ಪತ್ರಿಕೆಯಲ್ಲಿ ಪ್ರಕಟವಾಗಿದ್ದವು. ಅವರ ಸಾಹಿತ್ಯ ಯಾತ್ರೆಯ ಪೂರ್ವಾರ್ಧವು ಬಹಳ ಸಮೃದ್ಧ ಮತ್ತು ಬಹುಮುಖಿ. ಕಾವ್ಯ, ನಾಟಕ, ಅನುವಾದ ವಿಮರ್ಶೆಗಳ ಬೆಳಸು ಬಹು ಹುಲುಸಾಗಿದ್ದವು. ಇನ್ನು ಛಂದಸ್ಸಿನ ವಿಷಯದಲ್ಲೂ ಅವರು ಪ್ರಗತಿಪರರು. ಶತಮಾನದ ಹಿಂದೆಯೇ ಕವನದಲ್ಲಿ ಪ್ರಾಸವನ್ನು ಕೈ ಬಿಟ್ಟಿದ್ದರು.
  • ಅನುಕೂಲೆಯಾದ ಮಡದಿ ನೆಮ್ಮದಿಯ ಸಂಸಾರ ಮತ್ತು ನಿರಂತರ ಆದಾಯದಿಂದ ಗೃಹಸೌಖ್ಯವಿದ್ದ ಆ ಕಾಲದಲ್ಲಿ ಗಿಳಿವಿಂಡು, ನಂದಾದೀಪ, ಹೃದಯರಂಗ ಕವನ ಸಂಕಲನಗಳು ಹೊರಬಂದವು. ಏಸುವಿನ ಕೊನೆಯ ದಿನಗಳ ಬಗ್ಗೆ ಗೊಲ್ಗೋಥಾ ಬುದ್ಧನ, ಕೃಷ್ಣನ ಹಾಗೂ ಗಾಂಧೀಜಿ ಯವರ ಕೊನೆಯ ದಿನಗಳ ಕುರಿತು ಬರೆದ ವೈಶಾಖಿ, ಪ್ರಭಾಸ ಹಾಗೂ ದೆಹಲಿ ಖಂಡಕಾವ್ಯಗಳು ನಂತರ ಪ್ರಕಟವಾಗಿವೆ.
  • ವೈಶಾಖಿ, ಪ್ರಾಕೃತದ ಆಳವಾದ ಅಧ್ಯಯನದ ಫಲ ಗೋಲ್ಗೋಥಾ ಖಂಡ ಕಾವ್ಯಕ್ಕೆ ಗ್ರೀಕ್ ಮೂಲ ಸಾಮಗ್ರಿಯ ಅವಲೋಕನ ಕಾರಣ, ಹೆಬ್ಬೆರಳು ಚಿತ್ರಭಾನು ನಾಟಕಗಳು, ಅಲ್ಲದೆ ‘ ನೋ’ ಎಂಬ ಜಪಾನಿ ನಾಟಕಕಾರನ ಎಂಟು ಕೃತಿಗಳ ಅನುವಾದ ಜೊತೆಗೆ ಸಂಶೋಧನೆ ಮತ್ತು ವಿಮರ್ಶೆ ಮೊದಲಾದವು ಬೆಳಕು ಕಂಡವು. ಅವುಗಳಲ್ಲಿ ಸೃಜನಶೀಲ ಕೃತಿಗಳ ಸಂಖ್ಯೆಯೇ ಅಧಿಕ. ಇವರ ಸಾಂಸಾರಿಕ ಜೀವನ ಸುಖದ ಅವಧಿ ಬಹು ಕಡಿಮೆ. ಹುಟ್ಟಿದ ಒಂದು ಹೆಣ್ಣು ಮಗು ಬೇಗನೆ ತೀರಿ ಹೋಯಿತು. 1927 ರಲ್ಲಿ ಇವರ ಹೆಂಡತಿ ಕೃಷ್ಣಾಬಾಯಿ ಮರಣ ಹೊಂದಿದರು.

ರಾಷ್ಟ್ರಕವಿ ಗೋವಿಂದ ಪೈ ರವರ ಕೃತಿಗಳು

ಕವನ ಸಂಕಲನಗಳು :

  • ಗಿಳಿವಿಂಡು
  • ನಂದದೀಪ
  • ಹೃದಯ ರಂಗ
  • ವಿಟಂಕ
  • ಇಂಗಡಲು (ಆಯ್ದ ಕವನಗಳು)

ಖಂಡಕಾವ್ಯಗಳು :

  • ಗೊಲ್ಗೊಥಾ
  • ವೈಶಾಖಿ

ಇತರೆ ಕೃತಿಗಳು :

  • ಮೂರು ಉಪನ್ಯಾಸಗಳು
  • ಗೋವಿಂದ ಪೈ ಅವರ ಕೆಲವು ಪತ್ರಗಳು
  • ಗೀತಾಂಜಲಿ

ಗೌರವ/ಪುರಸ್ಕಾರ

  • ಕನ್ನಡದ ಪ್ರಥಮ ರಾಷ್ಟ್ರಕವಿ
  • ೧೯೪೯ರಲ್ಲಿ ಮದರಾಸು ಸರಕಾರವು (೧೯೫೬ರಲ್ಲಿ ಕರ್ನಾಟಕ ಏಕೀಕರಣಕ್ಕಿಂತ ಮೊದಲು ದಕ್ಷಿಣ ಕನ್ನಡ ಜಿಲ್ಲೆಯು ಆಗಿನ ಮದರಾಸು ರಾಜ್ಯದಲ್ಲಿ ಅಂದರೆ ಈಗಿನ ತಮಿಳುನಾಡಿನಲ್ಲಿದ್ದಿತು.)
  • ಗೋವಿಂದ ಪೈಗಳಿಗೆ ರಾಷ್ಟ್ರ ಕವಿ ಎಂದು ಸನ್ಮಾನ ನೀಡಿ ಗೌರವಿಸಿತು.
  • ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ- ೧೯೫೦ರಲ್ಲಿ ಮುಂಬಯಿಯಲ್ಲಿ ಜರುಗಿದ ೩೪ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಗೋವಿಂದ ಪೈಗಳು ಅಧ್ಯಕ್ಷರಾಗಿದ್ದರು.

Leave a Reply

Your email address will not be published. Required fields are marked *