rtgh

ವಾಹನ ಸವಾರರೇ ಹುಷಾರ್! ಈ ರೀತಿಯ ‘HSRP’ ನಂಬರ್ ಪ್ಲೇಟ್ ಹಾಕಿಸಿದ್ರೆ ಕ್ರಿಮಿನಲ್ ಕೇಸ್..!


ಬೆಂಗಳೂರು : ವಾಹನ ಸವಾರರೇ ಹುಷಾರ್…. ಡೂಪ್ಲಿಕೇಟ್ ವೆಬ್ ಸೈಟ್ ನಲ್ಲಿ HSRP ನಂಬರ್ ಪ್ಲೇಟ್ ಹಾಕಿಸಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಕಳುಹಿಸುವುದಾಗಿ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

HSRP Number Plate

ಬೆಂಗಳೂರಿನ ಅನೇಕಲ್ ನ ಸರ್ಜಾಪುರದಲ್ಲಿ ಮಾತನಾಡಿದ‌ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವುದರಲ್ಲಿ ಯಾವುದೇ ಗೊಂದಲವಿಲ್ಲ, ಸದ್ಯ ನಂಬರ್ ಪ್ಲೇಟ್ಗಳ ಅಳವಡಿಕೆಗೆ 3 ತಿಂಗಳು ಕಾಲಾವಕಾಶ ನೀಡಲಾಗಿದೆ.

ಸರ್ಕಾರ ಸೂಚಿಸಿರುವ ವೆಬ್ ಸೈಟ್ ಮೂಲಕವೇ ನೊಂದಣಿ ಮಾಡಿಕೊಳ್ಳಬೇಕು, ಡೂಪ್ಲಿಕೇಟ್ ವೆಬ್ ಸೈಟ್ ನಲ್ಲಿ ನಂಬರ್ ಪ್ಲೇಟ್ ಹಾಕಿಸಿದರೆ ಕ್ರಿಮಿನಲ್ ಕೇಸ್ ಹಾಕಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ಅವರು ಎಚ್ಚರಿಕೆ ನೀಡಿದ್ದಾರೆ.

HSRP ನಂಬರ್ ಪ್ಲೇಟ್ ಆಳವಡಿಕೆ ಮಾಡಲು ಆನ್ಲೈನ್ ಮೂಲಕ ನೋಂದಣಿ ಮಾಡಿಸಬೇಕು, ಈ ಸಮಯದಲ್ಲಿ ತಾಂತ್ರಿಕ ತೊಂದರೆಯಾದರೆ ಅದನ್ನು ಬಗೆಹರಿಸಲು ಸಹಾಯವಾಣಿಯನ್ನು ಸಾರಿಗೆ ಇಲಾಖೆ ಆರಂಭಿಸಿದೆ.

ಇದನ್ನೂ ಸಹ ಓದಿ: ಮಹಿಳೆಯರಿಗೆ ಹೊಡಿತು ಜಾಕ್‌ಪಾಟ್: ಗೃಹಲಕ್ಷ್ಮಿಯರ ಖಾತೆಗೆ ಇನ್ಮುಂದೆ 4 ಸಾವಿರ ಬರಲಿದೆ!!

ವಾಹನ ಮಾಲೀಕರು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಲು ಬೆಳಗ್ಗೆ 10 ರಿಂದ ಸಂಜೆ 5.30ರ ತನಕ 9449863429/26 ಸಂಖ್ಯೆಗೆ ಕರೆ ಮಾಡಬಹುದು. https://transport.karnataka.gov.in/?utm_source=DH-MoreFromPub&utm_medium=DH-app&utm_campaign=DH ವೆಬ್ ಸೈಟ್  ಅಥವ www.siam.in ಗೆ ಭೇಟಿ ನೀಡಿ ವಾಹನಗಳಿಗೆ HSRP ನಂಬರ್ ಪ್ಲೇಟ್ ನೋಂದಣಿ ಮಾಡಿಕೊಳ್ಳಬಹುದು ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ.

ಫೆ. 17ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಲಾಗಿತ್ತು. ಇನ್ನೂ ಹಲವಾರು ವಾಹನಗಳು ನಂಬರ್ ಪ್ಲೇಟ್ ಅಳವಡಿಸಿಕೊಳ್ಳದೆ ಇರುವುದರಿಂದ ಗಡುವನ್ನು ವಿಸ್ತರಿಸಲಾಗಿದೆ. ಸಾರಿಗೆ ಇಲಾಖೆ 31 ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಿದೆ ಎಂದು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಇ-ಶ್ರಮ್ ಕಾರ್ಡ್‌ನ ಹೊಸ ಕಂತು ಬಿಡುಗಡೆ! ತಕ್ಷಣ ನಿಮ್ಮ ಖಾತೆ ಚೆಕ್‌ ಮಾಡಿ

ಪ್ಯಾನ್‌ ಕಾರ್ಡ್‌ ಬಳಕೆದಾರರೇ ಹುಷಾರ್.!!‌ ಇನ್ಮುಂದೆ ಈ ಕೆಲಸ ಮಾಡಿದ್ರೆ ಬೀಳುತ್ತೆ 10 ಸಾವಿರ ದಂಡ


Leave a Reply

Your email address will not be published. Required fields are marked *