rtgh

Corona: ನಿಧಾನಗತಿಯಲ್ಲಿ ಕೊರೊನಾ ಏರಿಕೆ! ಬೆಂಗಳೂರಿನಲ್ಲಿ ಏರಿಕೆಯಾದ ಸೋಂಕು.4 ಸಾವಿರಕ್ಕೆ ಏರಿದ ಸಕ್ರಿಯ ಪ್ರಕರಣ.


Corona infection is increasing in Bangalore

Corona infection: ರಾಜ್ಯದಲ್ಲಿ ನಿಧಾನಗತಿಯಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಸ್ಕ್‌ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಬೆಂಗಳೂರಿನ ಎರಡು ಖಾಸಗಿ ಶಾಲೆಯ 31 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

Corona infection is increasing in Bangalore The number of active cases has crossed 4,000
Corona infection is increasing in Bangalore The number of active cases has crossed 4,000

ಬಿಬಿಎಂಪಿಯ ದಾಸರಹಳ್ಳಿ ವಲಯದ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 5ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಸೋಮವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕು ಇರುವ ತರಗತಿಯ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿವೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 833 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿನಿಂದ ಒಂದು ಸಾವುಂಟಾಗಿದೆ.  ಈ ಪೈಕಿ ಬೆಂಗಳೂರು ಒಂದರಲ್ಲೇ 791 ಪ್ರಕರಣಗಳು ದಾಖಲಾಗಿವೆ.

ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,371 ಆಗಿದ್ದು, ಅದರಲ್ಲಿ ರಾಜಧಾನಿಯೊಂದರಲ್ಲೇ 4,199 ಪ್ರಕರಣಗಳಿವೆ. 458 ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ, ಪಾಸಿವಿಟಿ ರೇಟ್ 3.47% ರಷ್ಟಿದೆ.

ಶಾಲೆಯ ತರಗತಿ ಮತ್ತು ಆವರಣಕ್ಕೆ ಸೋಂಕು ನಿವಾರಾಕ ದ್ರಾವಣ ಸಿಂಪಡಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ದಾಸರಹಳ್ಳಿ ವಲಯದ ಆರೋಗ್ಯ ವೈದ್ಯಾಧಿಕಾರಿ ಸುರೇಶ್ ರುದ್ರಪ್ಪ ತಿಳಿಸಿದ್ದಾರೆ.

ಇನ್ನು ಓದಿ: ಫೆಬ್ರವರಿ 1 ರಿಂದ ಸರ್ಕಾರೀ ನೌಕರರ ಪಿಂಚಣಿ ನಿಯಮದಲ್ಲಿ ಬದಲಾವಣೆ! ನಾಳೆಯಿಂದ ಹೊಸ ರೂಲ್ಸ್.

ಸೋಮವಾರ ರಾಜ್ಯದಲ್ಲಿ ಒಟ್ಟು 415 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 400 ಪ್ರಕರಣಗಳು ವರದಿಯಾಗಿವೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳು 3,688 ಇದ್ದು, ಬೆಂಗಳೂರಿನಲ್ಲಿಯೇ 3,542 ಪ್ರಕರಣಗಳಿವೆ.

ಕಳೆದ ಜೂನ್ 11 ರಂದು ರಾಜ್ಯ ಆರೋಗ್ಯ ಇಲಾಖೆ ಮಾಸ್ಕ್ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಮಾರ್ಷಲ್‌ಗಳು ಅಥವಾ ಪೊಲೀಸ್ ಸಿಬ್ಬಂದಿಯ ಸಹಾಯ ಪಡೆಯುವಂತೆ ಸುತ್ತೊಲೆಯಲ್ಲಿ ಸೂಚಿಸಲಾಗಿದೆ.

ಮುಚ್ಚಿದ ಸ್ಥಳಗಳಾದ ಶಾಪಿಂಗ್‌ ಮಾಲ್‌ಗಳು, ರೆಸ್ಟೊರೆಂಟ್‌ಗಳು, ಪಬ್‌ಗಳು, ಹೋಟೆಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಚೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಮಾಸ್ಕ್‌ ಧರಿಸಿದ್ದರೆ ಮಾತ್ರವೇ ಪ್ರವೇಶ ಕಲ್ಪಿಸುವುದು ಆಯಾ ಸಂಸ್ಥೆಯ ಮಾಲೀಕರು, ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ (ಬಸ್‌ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ ಎಂದು ಸೂಚಿಸಲಾಗಿದೆ.


Leave a Reply

Your email address will not be published. Required fields are marked *