rtgh

ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ; ದಿನಾಂಕ, ಸ್ಥಳ, ಸಮಯ, ಪೂರ್ಣ ತಂಡಗಳು. ಹಿಟ್ ಮ್ಯಾನ್ ಅಂಡ್ ಕಿಂಗ್ ಕೊಹ್ಲಿ ಔಟ್


2023ರ ನೂತನ ಏಷ್ಯಾ ಕಪ್ ಚಾಂಪಿಯನ್ ಭಾರತ ತಂಡ ಈ ವಾರದ ಅಂತ್ಯದಲ್ಲಿ ಏಕದಿನ ವಿಶ್ವಕಪ್‌ಗೂ ಮುನ್ನ ಮತ್ತೊಮ್ಮೆ ಕ್ರಿಕೆಟ್ ಮೈದಾನಕ್ಕೆ ಮರಳಲಿದೆ. ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ದ್ವಿಪಕ್ಷೀಯ ಏಕದಿನ ಸರಣಿಯನ್ನು ಆಡಲಿದೆ.

India vs Australia 2023 schedule and team list in kannada
India vs Australia 2023 schedule and team list in kannada

ind vs aus 2023 Odi teams and schedule in kannada

ಶುಕ್ರವಾರ, ಸೆಪ್ಟೆಂಬರ್ 22ರಂದು ಮೊಹಾಲಿಯಲ್ಲಿ ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿಶ್ವಕಪ್ ಮಾಜಿ ಚಾಂಪಿಯನ್‌ಗಳಾದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ.

ಈ ಸರಣಿಯು 2023ರ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಗೆ ಕೆಲವೇ ದಿನಗಳ ಮುಂಚಿತವಾಗಿ ನಡೆಯಲಿದೆ. ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಅಕ್ಟೋಬರ್ 5ರಂದು ಅಹಮದಾಬಾದ್‌ನಲ್ಲಿ ವಿಶ್ವಕಪ್ ಉದ್ಘಾಟನಾ ಪಂದ್ಯ ನಡೆಯಲಿದೆ.

ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್‌ಗೆ ಮುನ್ನ ತಮ್ಮ ತಂಡದ ಬೆಂಚ್ ಸಾಮರ್ಥ್ಯ ಮತ್ತು ಪ್ರದರ್ಶನವನ್ನು ಸುಧಾರಿಸಲು ಎದುರು ನೋಡುತ್ತವೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ಸೋಮವಾರ ಸಂಜೆ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದರು.

2023ರ ಏಷ್ಯಾ ಕಪ್‌ನಲ್ಲಿ ಗಾಯದಿಂದ ಚೇತರಿಸಿಕೊಂಡು ಪ್ರಭಾವಶಾಲಿ ಪುನರಾಗಮನ ಮಾಡಿದ ಕೆಎಲ್ ರಾಹುಲ್, ಮೊಹಾಲಿ ಮತ್ತು ಇಂದೋರ್‌ನಲ್ಲಿ ನಡೆಯಲಿರುವ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಖಾಯಂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ಗಾಯಗೊಂಡಿರುವ ಅಕ್ಷರ್ ಪಟೇಲ್‌ಗೆ ವಿಶ್ರಾಂತಿ ನೀಡಲಾಗಿದೆ.

ಮೊದಲೆರಡು ಏಕದಿನ ಪಂದ್ಯಗಳಿಗೆ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಉಪನಾಯಕರಾಗಿರುತ್ತಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೆಪ್ಟೆಂಬರ್ 27ರಂದು ರಾಜ್‌ಕೋಟ್‌ನಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯಕ್ಕೆ ಮರಳಲಿದ್ದಾರೆ. ಇದು 2023ರ ವಿಶ್ವಕಪ್‌ಗಾಗಿ ಭಾರತದ ಅಂತಿಮ 15 ಸದಸ್ಯರ ತಂಡ ಆಗಿರಲಿದೆ.

ಮೊದಲ ಎರಡು ಏಕದಿನ ಪಂದ್ಯಗಳ ನಂತರ ಅಕ್ಷರ್ ಪಟೇಲ್ ಅವರ ಫಿಟ್‌ನೆಸ್ ಅನ್ನು ನಿರ್ಣಯಿಸಲಾಗುತ್ತದೆ ಮತ್ತು ಇದರ ಪರಿಣಾಮವಾಗಿ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ತಂಡದಲ್ಲಿ ಆಯ್ಕೆ ಮಾಡಲಾಗಿದೆ. ಅಲ್ಲದೆ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಕೂಡ ತಂಡಕ್ಕೆ ಮರಳಿದ್ದು, ವಿಶ್ವಕಪ್‌ನಲ್ಲಿ ಸ್ಥಾನ ಪಡೆಯುತ್ತಾರಾ ಕಾದುನೋಡಬೇಕಿದೆ.

ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನದ ಮೇಲೆ ಭಾರತ ತಂಡ ಕಣ್ಣಿಟ್ಟಿದ್ದು, ಏಕದಿನ ವಿಶ್ವಕಪ್‌ಗೆ ಮುನ್ನುಡಿ ಬರೆಯಲಿದೆ.

ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ 3-0 ಅಂತರದಲ್ಲಿ ವೈಟ್‌ವಾಶ್ ಮಾಡಿದರೆ, ಪ್ರಸ್ತುತ ಅಗ್ರಸ್ಥಾನದಲ್ಲಿರುವ ಪಾಕಿಸ್ತಾನ ತಂಡವನ್ನು ನಂ.1 ಸ್ಥಾನದಿಂದ ಕೆಳಗಿಳಿಸಲು ಸಹಾಯ ಮಾಡುತ್ತದೆ. ಭಾರತ ತಂಡವನ್ನು 3-0 ಅಂತರದಲ್ಲಿ ವೈಟ್‌ವಾಶ್ ಮಾಡಲು ಯಶಸ್ವಿಯಾದರೆ, ಆಸ್ಟ್ರೇಲಿಯಾ ಕೂಡ ವಿಶ್ವದ ನಂ.1 ಏಕದಿನ ತಂಡವಾಗಬಹುದು.

2023ರ ಏಷ್ಯಾ ಕಪ್ ಪ್ರಶಸ್ತಿಯೊಂದಿಗೆ ಭಾರತ ತಂಡ ಈ ಸರಣಿಗೆ ಬರುತ್ತಿದ್ದು, ಆಸ್ಟ್ರೇಲಿಯಾ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಏಕದಿನ ಪಂದ್ಯಗಳನ್ನು ಸೋತು, ಐದು ಪಂದ್ಯಗಳ ಏಕದಿನ ಸರಣಿಯನ್ನು 2-3 ಅಂತರದಲ್ಲಿ ಕಳೆದುಕೊಂಡಿದೆ.

ಭಾರತ vs ಆಸ್ಟ್ರೇಲಿಯಾ ಸರಣಿಯ ವಿವರ

* ಭಾರತ vs ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಸೆಪ್ಟೆಂಬರ್ 22, 24 ಮತ್ತು 27ರಂದು ನಡೆಯಲಿದೆ.

* ಭಾರತ vs ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಕ್ರಮವಾಗಿ ಮೊಹಾಲಿ, ಇಂದೋರ್ ಮತ್ತು ರಾಜ್‌ಕೋಟ್‌ನಲ್ಲಿ ನಡೆಯಲಿದೆ.

* ಭಾರತ vs ಆಸ್ಟ್ರೇಲಿಯಾ ನಡುವಿನ ಎಲ್ಲಾ ಮೂರು ಏಕದಿನ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಪ್ರಾರಂಭವಾಗುತ್ತವೆ.

* ಭಾರತ vs ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಭಾರತದಲ್ಲಿ Sports18 ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರವಾಗಲಿದೆ.

* ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿಯು ಭಾರತದಲ್ಲಿ Jio Cinema ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ಆಗಲಿದೆ.

India squad for Australia

ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ ತಂಡಗಳು

ಮೊದಲ 2 ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

3ನೇ ಏಕದಿನ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ (ಫಿಟ್ನೆಸ್ ಆಧಾರದ ಮೇಲೆ), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಭಾರತ ವಿರುದ್ಧ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.


Leave a Reply

Your email address will not be published. Required fields are marked *