ಎಷ್ಟೋ ವಿದ್ಯಾರ್ಥಿಗಳಿಗೆ ತಮ್ಮ ಆರಂಭಿಕ ಶಿಕ್ಷಣವನ್ನು ಮಾಡಲು ಕೂಡ ಆರ್ಥಿಕ ಸಮಸ್ಯೆ ಇರುವುದರಿಂದ ಅದು ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ಬೇರೆ ಬೇರೆ ಕಂಪನಿಗಳು ನೀಡುವ ವಿದ್ಯಾರ್ಥಿವೇತನ ಹೆಚ್ಚು ಅನುಕೂಲಕರವಾಗುತ್ತದೆ ಎನ್ನಬಹುದು.
ಇದೀಗ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ 50,000 ದಿಂದ ಒಂದು ಲಕ್ಷ ರೂಪಾಯಿಗಳ ವರೆಗೆ ವಿದ್ಯಾರ್ಥಿ ವೇತನ ನೀಡುವ ಕಂಪನಿ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸುವ ರೀತಿ ಹೇಗೆ ಎನ್ನುವ ಮಾಹಿತಿ ಇಲ್ಲಿದೆ.
ಕೊಟಕ್ ಸೆಕ್ಯೂರಿಟಿ ಸ್ಕಾಲರ್ಶಿಪ್:
- ಕೋಟಕ್ ಸೆಕ್ಯೂರಿಟೀಸ್ ನ ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಹೆಸರಿನಲ್ಲಿ ವಿದ್ಯಾರ್ಥಿ ವೇತನವನ್ನು ರಾಜ್ಯದ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು.
- 9 ರಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಲಭ್ಯ
- ಕೋಟಕ್ ಕಂಪನಿಯಲ್ಲಿ ಕೆಲಸ ನಿರ್ವಹಿಸುವ ವರ್ಕರ್ ಗಳ ಮಕ್ಕಳು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ನೇರವಾಗಿ ಅವರು ಅರ್ಹತೆ ಪಡೆದಿರುತ್ತಾರೆ
- PWD ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು.
- ವಿಕಲ ಚೇತನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು
- ಈ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 55% ನಷ್ಟು ಅಂಕವನ್ನು ಪಡೆದಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಓದುತ್ತಿರುವ ಶಿಕ್ಷಣ ಸಂಸ್ಥೆಗೆ ದಾಖಲಾಗಿರುವುದಕ್ಕೆ ದಾಖಲಾತಿಯ ರಶೀದಿ
- ವಿಕಲ ಚೇತನರು ಎನ್ನುವುದಕ್ಕೆ ದೃಢೀಕರಣ ಪ್ರಮಾಣ ಪತ್ರ
- ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ (ಪೋಷಕರ ಬ್ಯಾಂಕ್ ಖಾತೆಯ ವಿವರ ನೀಡಬಹುದು)
ಅರ್ಜಿ ಸಲ್ಲಿಸುವುದು ಹೇಗೆ?
ಕೋಟಕ್ ಸೆಕ್ಯೂರಿಟೀಸ್ ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಗೆ ಅರ್ಹ ವಿದ್ಯಾರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ ಮತ್ತು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಇದಕ್ಕೆ ನೀವು ಕೋಟಕ್ ನ ಅಧಿಕೃತ ವೆಬ್ ಸೈಟ್ ಗೆ, kotak suraksha scholarship program ಈ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದು.
- ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ. ಒಂದು ಪೇಜ್ ಓಪನ್ ಆಗುತ್ತದೆ. ಅದ್ರಲ್ಲಿ Kotak Suraksha scholarship program for students ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿರಿ.
- ಈಗ ನೀವು ನಿಮ್ಮ ಮೊಬೈಲ್ ಸಂಖ್ಯೆ ಇಮೇಲ್ ಐಡಿ ಮೊದಲಾದ ದಾಖಲೆಗಳನ್ನು ನಮೂದಿಸಬೇಕು.
- ಅರ್ಜಿ ಅನ್ನು ಫಾರಂ ಭರ್ತಿ ಮಾಡಿದ ನಂತರ ಮೇಲೆ ತಿಳಿಸಲಾದ ದಾಖಲೆಗಳ ಸ್ಕ್ಯಾನ್ ಕಾಪಿ ಅಪ್ಲೋಡ್ ಮಾಡಬೇಕಾಗುತ್ತದೆ.
ಈ ರೀತಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ರೆ ಒಂದು ಲಕ್ಷದವರೆಗೂ ಸಹ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.