ಎಸ್ ಎಸ್ ಎಲ್ ಸಿ ಮಕ್ಕಳಿಗೆ ಇದು ನಿಮಗಿದು ಗುಡ್ ನ್ಯೂಸ್ ಸರ್ಕಾರ ಎಸ್ ಎಸ್ ಎಲ್ ಸಿ ಮಕ್ಕಳಿಗಾಗಿ ನೂತನ ಯೋಜನೆ 2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ಎಕ್ಸಾಮ್ ಬರೆಯುವ ಎಲ್ಲಾ ಮಕ್ಕಳಿಗೂ ಉಚಿತ ಬಿಸಿ ಊಟದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಇದರಿಂದ ಮಕ್ಕಳು ಯಾವುದೇ ಅಡಚಣೆಗಳಿಲ್ಲದೆ ಎಕ್ಸಾಮ್ ಗಳನ್ನು ಚೆನ್ನಾಗಿ ಮಾಡಲಿ ಎಂದು ಯೋಜನೆಯನ್ನು ಹಾಕಿಕೊಳ್ಳಲಾಗಿದೆ
202324ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆ ಕ್ಷೇತ್ರಗಳಲ್ಲಿ ಶಿಕ್ಷಣ ಇಲಾಖೆ ಮಾಡಿದೆ ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲನ್ನು ಹೊರಡಿಸಲಾಗಿದೆ. ದಿನಾಂಕ 25-3024 ರಿಂದ 64 2024ರ ವರೆಗೆ ಎಸ್ ಎಸ್ ಎಲ್ ಸಿ ಎಕ್ಸಾಮ್ ಗಳು ನಡೆಯಲಿದ್ದು ಕೇಂದ್ರಗಳಲ್ಲಿ ಪರೀಕ್ಷ ಕ್ರಮಕ್ಕೆ ಯಾವುದೇ ಅಡಚಣೆಗಳಾಗದಂತೆ ಎಸ್ ಎಸ್ ಎಲ್ ಸಿ ವಾರ್ಷಿಕ ಪಬ್ಲಿಕ್ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೂ ಮಧ್ಯಾಹ್ನ ಬಿಸಿಊಟವನ್ನು ಸಿದ್ಧಪಡಿಸಿ ವಿತರಿಸುವಂತೆ ಆದೇಶಿಸಿದೆ.
ಈ ಬಗ್ಗೆ ಪರೀಕ್ಷಾ ಕೇಂದ್ರದ ಶಾಲಾ ಮುಖ್ಯಸ್ಥರಿಗೆ ಹಾಗೂ ಪರೀಕ್ಷ ಕೇಂದ್ರದ ಅನುಷ್ಠಾನಾಧಿಕಾರಿಗಳಿಗೆ ಮತ್ತು ಮೇಲು ಚಕ್ರ ಮೇಲ್ವಿಚಾರಕ ಸಿಬ್ಬಂದಿಗಳಿಗೆ ಈ ಕೆಳಗಂಡ ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಿದೆ
1. ಅಡುಗೆ ಕೇಂದ್ರಗಳಿರುವ SSLC ಪರೀಕ್ಷಾ ಕೇಂದ್ರಗಳಲ್ಲಿ 1167-ಸರ್ಕಾರಿ ಮತ್ತು 884- ಅನುದಾನಿತ ಶಾಲೆಗಳ ಮಧ್ಯಾಹ್ನ ಬಿಸಿಯೂಟ ಸ್ವೀಕರಿಸಲು ಅಪೇಕ್ಷಿಸಿರುವ ಹಾಗೂ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಹಾಜರಾತಿ ಸಂಖ್ಯೆಗೆ ಅನುಗುಣವಾಗಿ ಬಿಸಿಯೂಟ ಸಿದ್ಧಪಡಿಸಿ ವಿತರಿಸುವಂತೆ ಸೂಚಿಸಿದೆ.
2. ಪರೀಕ್ಷಾ ಕೇಂದ್ರಗಳಿರುವ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಅಡುಗೆ ತಯಾರಿಕೆ ಮತ್ತು ಬಡಿಸುವ ನಿರ್ವಹಣೆಗೆ ಅಡುಗೆ ಸಿಬ್ಬಂದಿಯನ್ನು ಹಾಗೂ ಮೇಲ್ವಿಚಾರಕರಾಗಿ ವಿಷಯ ಬೋಧಕರಲ್ಲದ ಶಿಕ್ಷಕರಾದ ದೈಹಿಕ ಶಿಕ್ಷಣ ಶಿಕ್ಷಕರು, ವೃತ್ತಿ ಶಿಕ್ಷಕರು ಇದ್ದಲ್ಲಿ ಒಬ್ಬರನ್ನು ನಿಯೋಜಿಸಿ ಯಾವುದೇ ಆರೋಪಗಳಿಗೆ ಅವಕಾಶ ನೀಡದಂತೆ ವಿರ್ವಹಿಸಲು ಸೂಚಿಸಿದೆ.
3. ಏಪ್ರಿಲ್ 10 ರ ವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿಯೂ ಸಹ 1-10ನೇ ತರಗತಿಯವರೆಗೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ತಪ್ಪದೇ ಪೂರೈಸುವುದು.
4. ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸುವುದರೊಂದಿಗೆ,ಸುರಕ್ಷಿತವಾಗಿ ಶುಚಿ-ರುಚಿಯಾಗಿ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವುದು ಹಾಗೂ ಶಾಲಾ ಮಕ್ಕಳ ಸುರಕ್ಷತೆ ಮತ್ತು ಆರೋಗ್ಯ, ಬಿಸಿಯೂಟ ಆಹಾರದ ಉತ್ತಮ ಗುಣಮಟ್ಟ, ಸ್ವಚ್ಛತೆ ಮತ್ತು ನೈರ್ಮಲ್ಯ ಈ ಅಂಶಗಳಿಗೆ ಶಾಲಾ ಮುಖ್ಯಸ್ಥರು, ನಿರ್ವಾಹಕರು ಹಾಗೂ ಅಡುಗೆ ಸಿಬ್ಬಂದಿಯವರು ಪಥಮ ಆದ್ಯತೆ ನೀಡಿ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸುವುದು.
ಮೇಲ್ಕಂಡಂತೆ ಅಗತ್ಯ ಕ್ರಮವಹಿಸಲು ಸಂಬಂಧಿಸಿದ ಶಾಲೆಗಳ ಮುಖ್ಯಸ್ಥರಿಗೆ, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಹಂತದ ಇಲಾಖೆಯ ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಂಡಿರುವ ಎಲ್ಲಾ ಇಲಾಖಾ ಅಧಿಕಾರಿಗಳಿಗೆ ಹಾಗೂ ಪಿ ಎಂ ಪೋಷಣ್ ಅಧಿಕಾರಿಗಳಿಗೆ ಈ ಮೂಲಕ ಸೂಚಿಸಿದೆ.
ಇದೊಂದು ಅತ್ಯುತ್ತಮ ಮಾರ್ಪಾಡಾಗಿದ್ದು ಇದರಿಂದ ಮಕ್ಕಳಿಗೆ ತುಂಬಾ ಅನುಕೂಲವಾಗಲಿದೆ ಇಂತಹ ಅನುಕೂಲಗಳನ್ನು ಒದಗಿಸಿದಂತಹ ಶಿಕ್ಷಣ ಇಲಾಖೆಗೆ ಮಕ್ಕಳು ತುಂಬಾ ಹೃತ್ಪೂರ್ವಕವಾದ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ ಹಾಗೂ ಮಕ್ಕಳು ತುಂಬಾ ಸಂತೋಷದಿಂದ ಪರೀಕ್ಷೆಗೆ ಹಾಜರಾಗುತ್ತೇವೆ ಎಂದು ಸಂತಸವನ್ನು ಹಂಚಿಕೊಂಡಿದ್ದಾರೆ
2023-24 ಸಾಲಿನಲ್ಲಿ ಎಕ್ಸಾಮ್ ಬರೆಯುತ್ತಿರುವ ಎಲ್ಲಾ ನನ್ನ ಮಿತ್ರ ಗಳಿಗೆ ಮಲ್ನಾಡ್ ಸರಿಯಿಂದ ಶುಭ ಹಾರೈಸುತ್ತದೆ.