rtgh

ನಾಲ್ವಡಿ ಕೃಷ್ಣರಾಜ ಒಡೆಯರ್ ಜೀವನ ಚರಿತ್ರೆ, ಒಡೆಯರ್ ಅವರ ಕೊಡುಗೆಗಳು, ಆಳ್ವಿಕೆ ಮತ್ತು ಸಾಧನೆ, ಜಾರಿ ಮಾಡಿದ ಸಾಮಾಜಿಕ ಕಾನೂನುಗಳು


nalvadi krishnaraja wodeyar information in kannada
nalvadi krishnaraja wodeyar information in kannada

ಮೈಸೂರು: ಜೂನ್ 4, 1884ರಲ್ಲಿ ಜನಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣೀಭೂತರಾದವರು.

ನಾವು ಯಾವ ಯಾವುದನ್ನು ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅಂತಹ ಮಹನೀಯರ ಶ್ರೇಷ್ಠ ಸೇವೆ ಎಂದು ಕೊಂಡಾಡುತ್ತೇವೆಯೋ ಆ ಹಿರಿಮೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪಾತ್ರ ಕೂಡಾ ಮಹತ್ತರವಾದುದು. ಸರ್ವ ಕಾಲದಲ್ಲೂ ಪ್ರಾಜ್ಞರು ನಿಷ್ಠರು ಇದ್ದಿರುತ್ತಾರೆ. ಆ ಪ್ರಾಜ್ಞರಿಗೆ ಕಾರ್ಯದಕ್ಷತೆ ತೋರುವ ಅವಕಾಶ, ಸ್ವಾತಂತ್ರ್ಯ ಅಧಿಕಾರಗಳನ್ನು ನೀಡುವ ಮನೋಬಲ ರಾಜ್ಯಭಾರದವರಿಗೆ ಇದ್ದಾಗ ಮಾತ್ರವೇ ಅದು ಸಾಧ್ಯ ಎಂಬುದು ಅತ್ಯಂತ ಮುಖ್ಯ ಸಂಗತಿಯಲ್ಲವೆ..?

ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ 4, 1884 – ಆಗಸ್ಟ್ 3, 1940) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ 24ನೇ ರಾಜರು. ಇವರ ಆಳ್ವಿಕೆ 1902 ರಿಂದ 1940ರವರೆಗೆ ನಡೆಯಿತು.

ನಾಲ್ವಡಿ ಕೃಷ್ಣರಾಜ ಒಡೆಯರು 1895ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ 10 ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು. ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ , ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದುದರ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ದೊರಕಿದರು.

1902ರ ಆಗಸ್ಟ್ 8ನೇ ತಾರೀಖಿನಿಂದ ಮೈಸೂರು ರಾಜ್ಯದ ನೇರ ಉಸ್ತುವಾರಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು. ಆಗ ದಿವಾನರಾಗಿದ್ದ ಸರ್. ಕೆ. ಶೇಷಾದ್ರಿ ಐಯರ್ ರವರ ಸಹಕಾರದೊಡನೆ ಮೈಸೂರು ರಾಜ್ಯದ ಸರ್ವತೋಮಖ ಅಭಿವೃದ್ದಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣ ಬದ್ದರಾದರು, ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ದಿಯನ್ನು ಮೈಸೂರು ರಾಜ್ಯವು ಕಂಡುದರಿಂದ ,ಮೈಸೂರು ಸಂಸ್ಥಾನಕ್ಕೆ ‘ ಮಾದರಿ ಮೈಸೂರು’ ಎಂಬ ಕೀರ್ತಿ ಪ್ರಾಪ್ತವಾಯಿತು.

ನಾಲ್ವಡಿ ಕೃಷ್ಣರಾಜ ಒಡೆಯರ್ ಜೀವನ ಚರಿತ್ರೆ

ಕೃಷ್ಣರಾಜ ಒಡೆಯರ್ 1884 ರ ಜೂನ್ 4 ರಂದು ಮೈಸೂರು ಅರಮನೆಯಲ್ಲಿ ಜನಿಸಿದರು. ತಂದೆ ಚಾಮರಾಜ ಒಡೆಯರ್, ತಾಯಿ ಕೆಂಪ ನಂಜಮ್ಮಣ್ಣಿ. ಇವರು ತಮ್ಮ 10 ನೇ ವಯಸ್ಸಿನಲ್ಲಿ ಅಧಿಕಾರಕ್ಕೆ ಬರುತ್ತಾರೆ. ತಾಯಿ ಕೆಂಪ ನಂಜಮ್ಮಣ್ಣಿ ರಾಜಪ್ರತಿನಿಧಿಯಾಗಿ ವಾಣಿ ವಿಲಾಸ ಸನ್ನಿದಾನದಲ್ಲಿ ಆಡಳಿತ ನಿರ್ವಹಿಸಿದಳು.

ನಾಲ್ವಡಿ ಕೃಷ್ಣರಾಜ ಒಡೆಯರ್ ಶಿಕ್ಷಣ

ಮಹಾರಾಜರು ತಮ್ಮ ಆರಂಭಿಕ ಶಿಕ್ಷಣ ಮತ್ತು ತರಬೇತಿಯನ್ನು ಲೋಕರಂಜನ್ ಅರಮನೆಯಲ್ಲಿ ಪಿ.ರಾಘವೇಂದ್ರ ರಾವ್ ಅವರ ನಿರ್ದೇಶನದಲ್ಲಿ ಪಡೆದರು. ಪಾಶ್ಚಾತ್ಯ ಅಧ್ಯಯನದ ಜೊತೆಗೆ, ಅವರು ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಕಲಿಸಿದರು ಮತ್ತು ಕುದುರೆ ಸವಾರಿ ಮತ್ತು ಭಾರತೀಯ ಮತ್ತು ಪಾಶ್ಚಿಮಾತ್ಯ ಶಾಸ್ತ್ರೀಯ ಸಂಗೀತವನ್ನು ಕಲಿಸಿದರು. ಅವರ ಆರಂಭಿಕ ಆಡಳಿತಾತ್ಮಕ ತರಬೇತಿಯನ್ನು ಬಾಂಬೆನಾಗರಿಕ ಸೇವೆಯ ಸರ್ ಸ್ಟುವರ್ಟ್ ಫ್ರೇಸರ್ ಅವರು ನೀಡಿದರು. ನ್ಯಾಯಶಾಸ್ತ್ರದ ತತ್ವಗಳು ಮತ್ತು ಆದಾಯ ಆಡಳಿತದ ವಿಧಾನಗಳ ಅಧ್ಯಯನವು ರಾಜ್ಯದ ವ್ಯಾಪಕ ಪ್ರವಾಸಗಳಿಂದ ಪೂರಕವಾಗಿದೆ, ಈ ಸಮಯದಲ್ಲಿ ಅವರು ನಂತರ ಆಳಲು ಬಂದ ದೇಶದ ಸ್ವರೂಪದ ಬಗ್ಗೆ ವ್ಯಾಪಕವಾದ ಜ್ಞಾನವನ್ನು ಪಡೆದರು.

ಆಳ್ವಿಕೆ ಮತ್ತು ಸಾಧನೆ

ಆಸ್ಥಾನದಲ್ಲಿ ಸಂಗೀತಕ್ಕೆ ಪ್ರೋತ್ಸಾಹ :

ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಂಗೀತಕ್ಕೆ ವಿಶೇಷ ಘೋಷಣೆ ನೀಡಿದರು. ವೀಣೆ ಶೇಷಣ್ಣ, ವಾಸುದೇವಾಚಾರ್ಯ, ಪಿಟೀಲು ಚೌಡಯ್ಯ, ಮುತ್ತಯ್ಯ, ಎಸ್.ಕೇಶವಮೂರ್ತಿ, ಪಿಟೀಲು ರಾಮನಂತವರು ಆಸ್ಥಾದಲ್ಲಿದ್ದರು.

ದಿವಾನರುಗಳು :

ಕೃಷ್ಣಮೂರ್ತಿ, ಮಾದವರಾವ್‌, ಆನಂದರಾವ್‌, ಸರ್.ಎಂ. ವಿಶ್ವೇಶ್ವರಯ್ಯ, ಕಾಂತರಾಜೇ ಅರಸ್‌ ಮತ್ತು ಮಿರ್ಜಾ ಇಸ್ಮಾಯಿಲ್‌ ರಂತಹ ದಕ್ಷ ದಿವಾನರು ಇವರ ಕಾಲದ ಪ್ರಗತಿಗೆ ಕಾರಣರಾದರು.

ಆಡಳಿತ ಸುಧಾರಣೆ

ಪ್ರಜಾಪ್ರತಿನಿಧಿ ಸಭೆ :

1923 ರಲ್ಲಿ ಹೊಸ ಕಾನೂನನ್ನು ಜಾರಿಗೆ ತರಲಾಯಿತು ಮತ್ತು ಇದರಿಂದ ಈ ಸಭೆ ಶಾಸನಬದ್ದ ಸಭೆಯಾಯಿತು. ವರ್ಷಕ್ಕೆ 2 ಬಾರಿ ಸಭೆ ನಡೆಯುತ್ತಿತ್ತು. ಸಭೆಯಲ್ಲಿ 275 ಜನ ಸದಸ್ಯರಿದ್ದರು.

ನ್ಯಾಯವಿಧಾಯಕ ಸಭೆ :

1907 ರಲ್ಲಿ ಸ್ಥಾಪನೆ ಒಟ್ಟು 50 ಜನ ಸದಸ್ಯರಿದ್ದರು. ಅದರಲ್ಲಿ ಜನರಿಂದ ಆಯ್ಕೆಯಾದವರು 22 ಜನರಿದ್ದರು.

ಈ ಸಂಸ್ಥೆ ಮೇಲ್ಮನೆಯ ರೀತಿಯಲ್ಲಿ ಕಾರ್ಯ ಮಾಡುತ್ತಿತ್ತು, ಜೂನ್‌ ಮತ್ತು ಡಿಸೆಂಬರ್‌ ತಿಂಗಳು ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿತ್ತು.

ವಾಣೀವಿಲಾಸ ಸಾಗರ

ನೀರಾವರಿ:

 • 1907 ರಲ್ಲಿ ‘ವಾಣೀವಿಲಾಸ ಸಾಗರ’ (ಮಾರಿ ಕಣಿವೆ) ಕಟ್ಟಲ್ಪಟ್ಟಿತು.
 • 1911 ರಲ್ಲಿ ಆರಂಭವಾದ ‘ಕೃಷ್ಣರಾಜ ಸಾಗರ’ ಭಾರತದ ಮೊಟ್ಟ ಮೊದಲ ಬೃಹತ್ ಜಲಾಶಯ. ಭಾರತದ, ಏಷ್ಯಾದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿರುವ ಕೃಷ್ಣರಾಜಸಾಗರ ನಿರ್ಮಾಣದ ಕೀರ್ತಿ ನಾಲ್ವಡಿಯರಿಗೆ ಸಲ್ಲುತ್ತದೆ. 1932ರಲ್ಲಿ ಅಣೆಕಟ್ಟು ನಿರ್ಮಾಣದ ಕಾರ್ಯ ಪುರ್ಣಗೊಂಡಿತು.
 • 1900ರಲ್ಲಿಯೇ ಶಿವನ ಸಮುದ್ರದ ಬಳಿ ಕಾವೇರಿ ನದಿಯಿಂದ ಜಲ ವಿದ್ಯುತ್ ಕೇಂದ್ರ ಆರಂಭವಾಯಿತು. ಇದು ಭಾರತದ ಮೊದಲ ಜಲ ವಿದ್ಯುತ್ ಕೇಂದ್ರ. ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ 1905 ಆಗಸ್ಟ್ 3 ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು.

ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಕೊಡುಗೆಗಳು

 • ಹಲವಾರು ಊರುಗಳಿಗೆ ರೈಲು ಮಾರ್ಗಗಳನ್ನು 1931 ರ ವೇಳೆಗೆ ಪೂರೈಸಲಾಯಿತು.
 • 1907 ರಲ್ಲಿ ವಾಣಿ ವಿಲಾಸ ಸಾಗರ ಆಣೆಕಟ್ಟು.
 • 1911 ರಲ್ಲಿ ಕೃಷ್ಣರಾಜ ಸಾಗರ ಆಣೆಕಟ್ಟು.
 • ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವ್ನು ಉಚಿತ ಮತ್ತು ಕಡ್ಡಾಯ.
 • 1915 ರಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ನ್ನು ಪ್ರಾರಂಭಿಸಲಾಯಿತು.
 • ಮೈಸೂರು ವಿಶ್ವವಿದ್ಯಲಯ ಸ್ಥಾಪನೆ – 1916.
 • ಅಕ್ಟೋಬರ್‌ 2, 1913 ರಂದು ಮೈಸೂರು ಬ್ಯಾಂಕ್‌ ಸ್ಥಾಪನೆ.
 • 270 ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು.
 • 1918 ರ ಮಿಲ್ಲರ್‌ ಸಮಿತಿ
 • 1921 ರಲ್ಲಿ ಪ್ರಥಮ ಬಾರಿಗೆ ಎಲ್ಲ ಹಿಂದುಳಿದ ಸಮುದಾಯಗಳಿಗೆ ಶೇ 75% ರಷ್ಟು ಮೀಸಲಾತಿ ನೀಡಲು ಆದೇಶ ಹೊರಡಿಸಲಾಯಿತು.
 • 1939ರ ಫೆಬ್ರವರಿ 5 ರಂದು ಜೋಗ ಜಲಪಾತದ ಬಳಿ ಶರಾವತಿ ನೀರಿನಿಂದ ವಿದ್ಯುತ್‌ ಉತ್ಪಾದನೆ ಮಾಡಲು ಯೋಜನೆ ರೂಪಿಸಲಾಯಿತು.

ಜಾರಿ ಮಾಡಿದ ಸಾಮಾಜಿಕ ಕಾನೂನುಗಳು:

 • 1909ರಲ್ಲಿ ದೇವದಾಸಿ ಪದ್ಧತಿ ನಿಷೇಧ
 • 1910ರಲ್ಲಿ ಬಸವಿ ಪದ್ಧತಿ ರದ್ಧತಿ
 • 1910ರಲ್ಲಿ ’ಗೆಜ್ಜೆಪೂಜೆ’ ಪದ್ಧತಿ ಸಂಪೂರ್ಣ ನಿರ್ಮೂಲನೆ
 • 1936ಜುಲೈ ೧೪ ರಂದು ವೇಶ್ಯಾವೃತ್ತಿ ತಡೆಗಟ್ಟುವ ಕಾಯ್ದೆ ಜಾರಿ
 • 1936ಜುಲೈ ೭ ರಂದು ವಿಧವೆಯರಿಗೆ ಮರುವಿವಾಹ ಮಾಡಿಕೊಳ್ಳುವ ಕಾಯ್ದೆಯ ಜಾರಿ
 • 1936ಜುಲೈ ೭ ರಂದು ಸ್ತ್ರೀಯರಿಗೆ ಕಡ್ಡಾಯ ಶಿಕ್ಷಣ ಜಾರಿ
 • 1914ರಲ್ಲಿ ಶಾಲಾ ಪ್ರವೇಶಕ್ಕೆ ಜಾತಿ ಪರಿಗಣನೆಯ ನಿಷೇಧ
 • 1919ರಲ್ಲಿ ಮಾಧ್ಯಮಿಕ ಶಾಲಾ ಮಟ್ಟದಲ್ಲಿ ಶಿಕ್ಷಣ ಶುಲ್ಕ ರದ್ಧತಿ
 • 1927ರಲ್ಲಿ ಸ್ತ್ರೀಯರಿಗೆ ಮತದಾನದ ಹಕ್ಕನ್ನು ಮೊಟ್ಟಮೊದಲ ಬಾರಿಗೆ ಕಲ್ಪಿಸಿಕೊಟ್ಟರು
 • 1905ರಲ್ಲಿ ಸಹಕಾರಿ ಕಾರ್ಮಿಕ ಪರಿಹಾರ ಕಾಯ್ದೆಯನ್ನು ಜಾರಿಗೆ ತಂದರು
 • 1913ರಲ್ಲಿ ಮೈಸೂರು ಗ್ರಾಮ ನ್ಯಾಯಾಲಯ ಕಾಯ್ದೆಯನ್ನು ಜಾರಿ ಮಾಡಿದರು
 • 1918ರಲ್ಲಿ ಗ್ರಾಮ ಪಂಚಾಯ್ತಿಗಳ ಕಾಯ್ದೆಯನ್ನು ಜಾರಿಗೆ ತಂದರು

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಘನತೆ ಮತ್ತು ಗೌರವ

 • ಗಾಂಧೀಜಿಯವರು ಸಹ ಹರಿಜನ ಪತ್ರಿಕೆಯಲ್ಲಿ ಮೈಸೂರನ್ನು ರಾಮರಾಜ್ಯ ಎಂದು ಮಾಹಾರಾಜರನ್ನು “ರಾಜರ್ಷಿ” ಎಂದು ಕರೆಯುತ್ತಾರೆ.
 • ಬ್ರಿಟೀಷ್‌ ಸರ್ಕಾರ ಅವರಿಗೆ “ಗ್ರ್ಯಾಂಡ್‌ ಕಮಾಂಡರ್‌ ಆಫ್‌ ಇಂಡಿಯನ್‌ ಎಂಪೈರ” ಎಂಬ ಬಿರುದನ್ನು ಕೊಟ್ಟಿತು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮರಣ

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 38 ವರ್ಷಗಳ ಕಾಲ ದಕ್ಷ ಆಡಳಿತ ನಡೆಸಿ ಪ್ರಜೆಗಳಿಂದ “ರಾಜರ್ಷಿ” ಬಿರುದು ಪಡೆದರು. ತಮ್ಮ ಸಂಸ್ಥಾನದ ಏಳಿಗೆಗಾಗಿ, ತಮ್ಮ ಪ್ರಜೆಗಳ ನೆಮ್ಮದಿ ಬದುಕಿಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟರು. ಸಾಮಾಜಿಕ ಪರಿವರ್ತನೆಯ ರೂವಾರಿಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆಗಸ್ಟ್ 3,1940 ರಲ್ಲಿ ತಮ್ಮ ಇಹಲೋಕದ ಯಾತ್ರೆ ಮುಗಿಸಿದರು.


Leave a Reply

Your email address will not be published. Required fields are marked *