2023-24ನೇ ಸಾಲಿನ ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ವಿದ್ಯಾರ್ಥಿ ವೇತನ(ಎನ್.ಎಂ.ಎಂ.ಎಸ್) ಪರೀಕ್ಷೆಯು ಡಿ.17ರಂದು ನಡೆಸಲಾಗುತ್ತಿದ್ದು, 8ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡು, ಪಾಸ್ ಆದ್ರೇ ಪ್ರತಿ ತಿಂಗಳು 1,000 ಸ್ಕಾಲರ್ ಶಿಫ್ ಸಿಗಲಿದೆ.
ಹೌದು ರಾಜ್ಯ ಸರ್ಕಾರಿ, ಸರ್ಕಾರಿ ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ಪ್ರಸಕ್ತ ಸಾಲಿನ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,000 ರೂ.ಗಳ ಸ್ಕಾಲರ್ ಶಿಪ್ ಕೊಡೋದಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅ.04ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಂಶುಪಾಲರ ಮೂಲಕ ಸಲ್ಲಿಸಬಹುದಾಗಿದೆ.
latest scholarship information in kannada
ಏನಿದು ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನ?
ಕೇಂದ್ರ ಪ್ರಾಯೋಜಿತ ಯೋಜನೆ “ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ಸ್ಕಾಲರ್ಶಿಪ್ ಸ್ಕೀಮ್ (ಎನ್‌ಎಂಎಂಎಸ್‌ಎಸ್)” ಅನ್ನು ಮೇ, 2008 ರಲ್ಲಿ ಪ್ರಾರಂಭಿಸಲಾಯಿತು.
ಇದನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಾರಿಗೆ ತರುತ್ತದೆ. ಆರ್ಥಿಕವಾಗಿ ದುರ್ಬಲ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. 8ನೇ ತರಗತಿಯಲ್ಲಿ ಶಾಲೆಯಿಂದ ಹೊರಗುಳಿಯುವುದನ್ನು ತಡೆಯುವುದು ಮತ್ತು ಮಾಧ್ಯಮಿಕ ಹಂತದಲ್ಲಿ ಅಧ್ಯಯನವನ್ನು ಮುಂದುವರಿಸಲು ಪ್ರೋತ್ಸಾಹಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ರಾಜ್ಯ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ 9 ರಿಂದ 12 ನೇ ತರಗತಿಯವರೆಗೆ ಅಧ್ಯಯನ ಮಾಡಲು ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ 12,000 / – ರೂ.ಗಳ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅಂದರೇ ಪ್ರತಿ ತಿಂಗಳು ರೂ.1,000 ನೀಡಲಾಗುತ್ತದೆ.
ವಿವಿಧ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ವಿದ್ಯಾರ್ಥಿವೇತನದ ಕೋಟಾ ಇದೆ. ಎಲ್ಲಾ ಮೂಲಗಳಿಂದ ಪೋಷಕರ ಆದಾಯ 1,50,000 ರೂ.ಗಿಂತ ಹೆಚ್ಚಿಲ್ಲದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಅರ್ಹರಾಗಿರುತ್ತಾರೆ. ರಾಜ್ಯ ಸರ್ಕಾರದ ಮಾನದಂಡಗಳ ಪ್ರಕಾರ ಮೀಸಲಾತಿ ಇದೆ. ವಿದ್ಯಾರ್ಥಿವೇತನದ ವಿದ್ಯಾರ್ಥಿಗಳ ಆಯ್ಕೆಯನ್ನು ರಾಜ್ಯ ಸರ್ಕಾರಗಳು ನಡೆಸುವ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ. ವಿದ್ಯಾರ್ಥಿವೇತನವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತ್ರೈಮಾಸಿಕ ಆಧಾರದ ಮೇಲೆ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.
ಸ್ಕಾಲರ್ ಶಿಪ್ ಅರ್ಜಿ ಸಲ್ಲಿಕೆ Click Here ✅ ✅ ✅
ಅರ್ಜಿ ಸಲ್ಲಿಕೆ ಹೇಗೆ.?
ಈ ವಿದ್ಯಾರ್ಥಿ ವೇತನಕ್ಕಾಗಿ 8ನೇ ತರಗತಿ ವಿದ್ಯಾರ್ಥಿಗಳುwww.scholorships.gov.inನಲ್ಲಿ ಪ್ರತಿ ವರ್ಷ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಿದ ನಂತ್ರ, ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆ ಇರಲಿದೆ. ಆ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ 9ನೇ ತರಗತಿಯಿಂದ ಮಾಸಿಕ 1000 ರೂನಂತೆ ವರ್ಷಕ್ಕೆ 12,000 ವಿದ್ಯಾರ್ಥಿವೇತನವನ್ನು 4 ವರ್ಷಗಳವರೆಗೆ -ಅಂದರೆ ದ್ವಿತೀಯ ಪಿಯುಸಿ ಮುಗಿಯುವವರೆಗೆ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು
8ನೇ ತರಗತಿ ವಿದ್ಯಾರ್ಥಿಗಳು 2023-24ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಅರ್ಜಿ ಸಲ್ಲಿಕೆ ದಿನಾಂಕ 13-09-2023ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 04-10-2023 ಆಗಿದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು
ವಿದ್ಯಾರ್ಥಿಗಳು 8ನೇ ತರಗತಿಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಓದುತ್ತಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 7ನೇ ತರಗತಿ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಾಗಿದ್ದಲ್ಲಿ ಶೇಕಡ.55 ಅಂಕಗಳನ್ನು, ಎಸ್‌ಸಿ / ಎಸ್‌ಟಿ ವಿದ್ಯಾರ್ಥಿಯಾಗಿದ್ದಲ್ಲಿ ಶೇಕಡ.50 ಅಂಕಗಳನ್ನು ಗಳಿಸಿರಬೇಕು. ಪೋಷಕರ / ಕುಟುಂಬದ ವಾರ್ಷಿಕ ಆದಾಯ ರೂ.3.50,000 ಮೀರಿರಬಾರದು.
NMMS ಪರೀಕ್ಷೆ ವಿಧಾನ
8ನೇ ತರಗತಿ ವಿದ್ಯಾರ್ಥಿಗಳು ಎನ್ ಎಂಎಂಎಸ್ ವಿದ್ಯಾರ್ಥಿ ವೇತನ ಪಡೆಯೋದಕ್ಕೆ ಪ್ರವೇಶ ಪರೀಕ್ಷೆ ಇರಲಿದೆ. ಇದರಲ್ಲಿ ಬಹುಆಯ್ಕೆಯ ಪ್ರಶ್ನೆಗಳಿರುತ್ತವೆ. ಪ್ರತಿ ಪ್ರಶ್ನೆಗೆ 1 ಅಂಕ ನಿಗಧಿಯಾಗಿರುತ್ತದೆ. ಒಟ್ಟು 2 ಪ್ರಶ್ನೆ ಪತ್ರಿಕೆಗಳಿರುತ್ತವೆ.
ಅರ್ಹತಾ ಪರೀಕ್ಷೆ ಯಾವಾಗ?
ಅಂದಹಾಗೇ 8ನೇ ತರಗತಿ ವಿದ್ಯಾರ್ಥಿಗಳು ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನಕ್ಕೆ ವಿದ್ಯಾರ್ಥಿಗಳ ಆಯ್ಕೆಯ ಪರೀಕ್ಷೆಯನ್ನು ಪಾಸ್ ಮಾಡಬೇಕಿದೆ. ಇದಕ್ಕಾಗಿ ದಿನಾಂಕ 17-12-2023ರಂದು ಅರ್ಹತಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಪಾಸ್ ಆದಂತ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ.1,000ದಂತೆ ವಾರ್ಷಿಕ ರೂ.12,000 ವಿದ್ಯಾರ್ಥಿ ವೇತನ ಸಿಗಲಿದೆ.