ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಯಲ್ಲಿ ಲಭ್ಯವಿರುವಂತಹ ಎಲ್ಲಾ ರೀತಿಯ ಸೇವೆಗಳನ್ನು ಆನ್ಲೈನ್ ನಲ್ಲಿ ಪಡೆಯಬಹುದು. ಗ್ರಾಮ ಪಂಚಾಯಿತಿ ಸೇವೆಗಳಿಗಾಗಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆ, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿ ಪರಿಶೀಲನೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಎಲ್ಲಾ ಕುಂದುಕೊರತೆಗಳನ್ನು ದಾಖಲಿಸಿ ಮೊಬೈಲ್ ನಲ್ಲಿ ವಾಟ್ಸಾಪ್ ಚಾಟ್ ಮೂಲಕ ಪರಿಹಾರವನ್ನು ಪಡೆಯಬಹುದು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಈ ನಿಟ್ಟಿನಲ್ಲಿ ಸಿದ್ಧಪಡಿಸಿರುವಂತಹ ಮಹತ್ವದ ‘ಪಂಚಮಿತ್ರ’ ವಾಟ್ಸಾಪ್ ನಂಬರ್ 82775 06000 ಅನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಲೋಕಾರ್ಪಣೆಯನ್ನು ಮಾಡಿದ್ದಾರೆ.
ಮೊಬೈಲ್ ನಲ್ಲಿ ನಂಬರ್ ಅನ್ನು ಸೇವ್ ಮಾಡಿಕೊಂಡು ಚಾಟ್ ಅನ್ನು ಆರಂಭಿಸಿದರೆ ಭಾಷೆಯ ಆಯ್ಕೆ, ಹೆಸರು, ವಿಳಾಸ, ಮೊಬೈಲ್ ನಂಬರ್ ಎಲ್ಲಾ ಮಾಹಿತಿ ನೀಡಿ ಲಾಗಿನ್ ಆಗಬೇಕು. ನಂತರ ಆಯ್ಕೆಗಳು ಆರಂಭವಾಗುತ್ತವೆ. ಕ್ರಮ ಸಂಖ್ಯೆಯನ್ನು ನಮೂದಿಸುವ ಮೂಲಕ ಜಿಲ್ಲೆ, ತಾಲೂಕು, ಗ್ರಾಮ ಆಯ್ಕೆಯನ್ನು ಮಾಡಿಕೊಂಡು ನಂತರ ಗ್ರಾಮ ಪಂಚಾಯಿತಿಯ ಆಯ್ಕೆ ಮಾಡಿಯನ್ನು ಚುನಾಯಿತ ಪ್ರತಿನಿಧಿಗಳು ಸಿಬ್ಬಂದಿಯ ಮಾಹಿತಿ ಪಡೆಯಬಹುದು.
ಇದನ್ನೂ ಸಹ ಓದಿ: ಗ್ರಾಮೀಣ ಪತ್ರಕರ್ತರ ಕನಸು ನನಸು: ಉಚಿತ ಬಸ್ ಪಾಸ್ ಘೋಷಣೆ
ಇದರ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ದೇಶದಲ್ಲೆ ಮೊದಲ ಬಾರಿಗೆ ಪಂಚಮಿತ್ರ ಎನ್ನುವ ವಿನೂತನವಾದ ವಾಟ್ಸಾಪ್ ಚಾಟ್ ಅನ್ನು ಅನುಷ್ಠಾನಕ್ಕೆ ತರಲಾಗಿದೆ. ಇದರ ಮೂಲಕವಾಗಿ ಸಾರ್ವಜನಿಕರು ಗ್ರಾಮ ಪಂಚಾಯಿತಿಯಲ್ಲಿ ಲಭ್ಯವಿರುವ ಕಟ್ಟಡ ನಿರ್ಮಾಣದ ಲೈಸೆನ್ಸ್, ನೀರು ಸರಬರಾಜು ಸಂಪರ್ಕ, ವ್ಯಾಪಾರ ಪರವಾನಿಗೆ ಸೇರಿದಂತೆ ಎಲ್ಲಾ ಇತರ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಬಹುದು ಎಂದು ತಿಳಿಸಿದ್ದಾರೆ.
ನರೇಗಾ ಯೋಜನೆ, ತ್ಯಾಜ್ಯ ನಿರ್ವಹಣೆ, ಪಂಚಾಯತ್ ರಾಜ್ ಇಲಾಖೆಗಳಿಗೆ ಸಂಬಂಧಿಸಿದ 78 ವರ್ಗಗಳ ಕುಂದು ಕೊರತೆಗಳನ್ನು ದಾಖಲಿಸಿ ಪರಿಹಾರವನ್ನು ಪಡೆದುಕೊಳ್ಳಬಹುದು. ಇದರ ಜೊತೆಗೆ ಸ್ವಾಧೀನ ಪ್ರಮಾಣ ಪತ್ರ, ರಸ್ತೆ ಅಗೆಯಲು ಅನುಮತಿ, ಕೈಗಾರಿಕೆ, ಕೃಷಿ ಆಧಾರಿತ ಉತ್ಪಾದನಾ ಘಟಕ ಪರವಾನಿಗೆ, ನಿರಾಕ್ಷೇಪಣಾ ಪತ್ರ, ಜಾಬ್ ಕಾರ್ಡ್ ವಿತರಣೆ ಇನ್ನು ಹಲವು ಸೇವೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇತರೆ ವಿಷಯಗಳು:
ಗ್ರಾಹಕರಿಗೆ ಗುಡ್ ನ್ಯೂಸ್: ಬೆಳ್ಳುಳ್ಳಿ ದರ ದಿಢೀರ್ ಇಳಿಕೆ!!
ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರದಿಂದ ದೊಡ್ಡ ಘೋಷಣೆ! ಪ್ರತಿ ಹೆಣ್ಣು ಮಕ್ಕಳ ಖಾತೆಗೆ ₹25,000
- ಗ್ರಾಮ ಪಂಚಾಯತಿಯ ಸೌಲಭ್ಯಗಳಿಗೆ ‘ಪಂಚಮಿತ್ರ’ ಹೆಲ್ಪ್ಲೈನ್ ಆರಂಭ – ಈಗ ಒಂದು ಕರೆ ಮತ್ತು ವಾಟ್ಸಾಪ್ ಮೂಲಕ ಲಭ್ಯವಿದೆ ಎಲ್ಲಾ ಸೇವೆಗಳು! - June 20, 2025
- ಮಲೆನಾಡು, ಉತ್ತರ ಕರ್ನಾಟಕದ 14 ಜಿಲ್ಲೆಗಳಿಗೆ ಜೂನ್ 20ರಂದು ಯೆಲ್ಲೋ ಅಲರ್ಟ್: ಕರಾವಳಿಯಲ್ಲಿ ಬಿಸಿಲು, ಮೀನುಗಾರರಿಗೆ ಎಚ್ಚರಿಕೆ - June 20, 2025
- ನಿಮ್ಮ ಊರಲ್ಲೇ ನ್ಯಾಯಬೆಲೆ ಅಂಗಡಿ ಆರಂಭಿಸಲು ಅವಕಾಶ – ಇಲ್ಲಿದೆ ಪೂರ್ತಿ ಮಾಹಿತಿ! - June 20, 2025