ಮೌಲ್ಯಮಾಪನ ಕಾರ್ಯ ಆರಂಭವಾಗಿದೆ :
ಏಪ್ರಿಲ್ 15ರಿಂದಲೇ ಸುಮಾರು 20 ದಿನಗಳು ಮೌಲ್ಯಮಾಪನ ಕಾರ್ಯ ನಡೆಯುವ ಸಾಧ್ಯತೆ ಇದೆ. ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಯಾಗಿರುವ ಮಂಜುಳಾ ರವರು ತಿಳಿಸಿದ್ದಾರೆ.
ಈ ಬಾರಿ ಮೂರು ಪರೀಕ್ಷೆಗಳು ನಡೆಯಲಿದೆ :
ಪೂರಕ ಪರೀಕ್ಷೆ ಅಲ್ಲದೆ ಈ ಬಾರಿ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದ್ದು. ಆದ್ದರಿಂದ ಈಗ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶವನ್ನು ಬೇಗ ಪ್ರಕಟಿಸಲು ತೀರ್ಮಾನಿಸಲಾಗಿದೆ.
ಫಲಿತಾಂಶ ನೋಡುವ ಲಿಂಕ್ :
ಅನೇಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶದ ಬಿಡುಗಡೆ ಸಮಯದಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಅಧಿಕೃತ ಲಿಂಕಿಗಾಗಿ ಹುಡುಕಾಡುತ್ತಾರೆ. ಹಾಗಾಗಿ ಈ ಬಾರಿ ಆಪ್ ಅನ್ನು ಡೌನ್ಲೋಡ್ ಮಾಡಿ ಫಲಿತಾಂಶವನ್ನು ನೋಡಬಹುದು.
2023ರ ಪರೀಕ್ಷಾ ಪಲಿತಾಂಶ :
ಒಟ್ಟು 835,102 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿರುತ್ತಾರೆ. ಅದರಲ್ಲಿ ಉತ್ತೀರ್ಣರಾದ ಸಂಖ್ಯೆ 7 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಪ್ರಥಮ ಸ್ಥಾನವನ್ನು ಚಿತ್ರದುರ್ಗ ಜಿಲ್ಲೆ ಪಡೆದುಕೊಂಡಿದ್ದು ಎರಡನೇ ಸ್ಥಾನವನ್ನು ಮಂಡ್ಯ ಜಿಲ್ಲೆ ಪಡೆದುಕೊಂಡಿರುತ್ತದೆ.
ಪರೀಕ್ಷೆ ಫಲಿತಾಂಶ ನೋಡುವುದು ಹೇಗೆ :
ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ನೋಡಲು ಕಾತುರದಿಂದ ಕಾಯುತ್ತಾರೆ. ಅಂತಹ ವಿದ್ಯಾರ್ಥಿಗಳು ಪ್ಲೇ ಸ್ಟೋರಿನಲ್ಲಿ ಲಭ್ಯವಿರುವ ಯಾಪನ್ನು ಬಳಸಿಕೊಂಡು ತಮ್ಮ ರಿಜಿಸ್ಟರ್ ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು.