rtgh

ಏಷ್ಯಾ ಕಪ್ 2023 : ಭಾರತ-ಪಾಕ್ ನಡುವೆ ಏಷ್ಯಾ ಕಪ್‌ ಕದನ! 2 ವಾರಗಳಲ್ಲಿ 3 ಬಾರಿ ಭಾರತ-ಪಾಕಿಸ್ತಾನ್ ಮುಖಾಮುಖಿ?

asia cup 203 ind vs pak

Spread the love

ಲೀಗ್ ಹಂತದಲ್ಲಿ ಸೆಪ್ಟೆಂಬರ್ 2 ರಂದು ಭಾರತ-ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತವಾಗಿದೆ. ಇನ್ನು ಲೀಗ್ ಪಂದ್ಯಗಳ ಬಳಿಕ ಪಾಕಿಸ್ತಾನ್ ಹಾಗೂ ಟೀಮ್ ಇಂಡಿಯಾ ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 10 ರಂದು ಮತ್ತೊಮ್ಮೆ ಮುಖಾಮುಖಿಯಾಗಲಿದೆ.

asia cup 203 ind vs pak
asia cup 203 ind vs pak

Asia Cup 2023: ಬಹುನಿರೀಕ್ಷಿತ ಏಷ್ಯಾಕಪ್​ ಶುರುವಾಗಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸುತ್ತಿರುವ ಈ ಬಾರಿಯ ಏಷ್ಯಾಕಪ್ ಟೂರ್ನಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿದೆ. ಅಂದರೆ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ಜರುಗಲಿದೆ. ಇಲ್ಲಿ ಭಾರತದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿರುವುದು ವಿಶೇಷ.

ಅದರಂತೆ ಸೆಪ್ಟೆಂಬರ್ 2 ರಂದು ನಡೆಯಲಿರುವ ಮೂರನೇ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದ್ದು, ಈ ಪಂದ್ಯದಲ್ಲಿ ಭಾರತದ ಎದುರಾಳಿ ಪಾಕಿಸ್ತಾನ್ ಎಂಬುದು ವಿಶೇಷ. ಅಲ್ಲದೆ ಈ ಪಂದ್ಯಕ್ಕೆ ಕ್ಯಾಂಡಿಯ ಕ್ರಿಕೆಟ್ ಗ್ರೌಂಡ್ ಆತಿಥ್ಯವಹಿಸಲಿದೆ.

ಭಾರತ-ಪಾಕ್ 3 ಬಾರಿ ಮುಖಾಮುಖಿ: ಲೀಗ್ ಹಂತದಲ್ಲಿ ಸೆಪ್ಟೆಂಬರ್ 2 ರಂದು ಭಾರತ-ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತವಾಗಿದೆ. ಇನ್ನು ಲೀಗ್ ಪಂದ್ಯಗಳ ಬಳಿಕ ಪಾಕಿಸ್ತಾನ್ ಹಾಗೂ ಟೀಮ್ ಇಂಡಿಯಾ ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 10 ರಂದು ಮತ್ತೊಮ್ಮೆ ಮುಖಾಮುಖಿಯಾಗಲಿದೆ.

ಇನ್ನು ಸೂಪರ್-4 ಹಂತದಲ್ಲೂ ಎರಡು ತಂಡಗಳು ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಅಲಂಕರಿಸಿದರೆ ಫೈನಲ್ ಪ್ರವೇಶಿಸಲಿದೆ. ಅದರಂತೆ ಸೆಪ್ಟೆಂಬರ್ 17 ರಂದು ಮೂರನೇ ಬಾರಿ ಮುಖಾಮುಖಿಯಾಗಬಹುದು.

ಅಂದರೆ ಕೇವಲ 15 ದಿನಗಳ ನಡುವೆ ಭಾರತ-ಪಾಕಿಸ್ತಾನ್ ನಡುವಣ ಮೂರು ಬಾರಿ ಮುಖಾಮುಖಿಯಾಗುವ ಸಾಧ್ಯತೆಯಿದೆ. ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ 3 ಬಾರಿ ಇಂಡೊ-ಪಾಕ್ ನಡುವಣ ಹೈವೋಲ್ಟೇಜ್ ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರಕಲಿದೆಯಾ ಕಾದು ನೋಡಬೇಕಿದೆ.5 / 7

ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).
ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).6 / 7
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

Spread the love

Leave a Reply

Your email address will not be published. Required fields are marked *